ಸ್ಪೀಕರ್ ಪಕ್ಷಪಾತಿ: ಕಾಂಗ್ರೆಸ್ ಕಿಡಿ

ನವದೆಹಲಿ: ಲೋಕಸಭಾ ಸ್ಪೀಕರ್ ಪಕ್ಷಪಾತಿ ಎಂದು ಕಾಂಗ್ರೆಸ್ ನಾಯಕರು ಕಲಾಪದಲ್ಲಿ ಆರೋಪಿಸಿದ್ದಾರೆ.
ಬುಧವಾರ ನಡೆದ ಲೋಕಸಭಾ ಕಲಾಪದಲ್ಲಿ ಮಾತನಾಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಸ್ಪೀಕರ್ ಪಕ್ಷಪಾತಿಯಾಗಿದ್ದು, ಕೇವಲ ಆಡಳಿತ ಪಕ್ಷಕ್ಕೆ ಮಾತನಾಡಲು ಅವಕಾಶ ನೀಡುತ್ತಿದ್ದಾರೆ. ಇತರೆ ಪಕ್ಷಗಳಿಗೆ ತಮ್ಮ ಅಭಿಪ್ರಾಯ ತಿಳಿಸಲು ಅವಕಾಶ ನೀಡುತ್ತಿಲ್ಲ ಎಂದು ಆಪಾಧಿಸಿದ್ದಾರೆ.
ಯುಪಿಎಸ್ಸಿ ಪರೀಕ್ಷೆ ಗೊಂದಲ ಹಾಗೂ ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಕೋಮುಗಲಭೆ ಕುರಿತು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಪಕ್ಷಗಳು ದೂರಿವೆ.
ಎನ್ಡಿಎ ಸರ್ಕಾರ ಬಂದ ಮೇಲೆ ಗಲಭೆ ಹೆಚ್ಚಳವಾಗಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಇದಕ್ಕೆ ಬಿಜೆಪಿ ಸಂಸಂದರು ಆಕ್ರೋಶ ವ್ಯಕ್ತಪಡಿಸಿದ್ದು, ಮೋದಿ ನೇತೃತ್ವದ ಸರ್ಕಾರದಲ್ಲಿ ಶಾಂತಿಯಿದೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಗಲಭೆ ನಡೆಯುತ್ತಿಲ್ಲ ಎಂದು ಬಿಜೆಪಿ ನಾಯಕ ವೆಂಕಯ್ಯನಾಯ್ಡು ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕರು ಕಲಾಪದಲ್ಲಿ ಗದ್ದಲ ಎಬ್ಬಿಸಿದ ಹಿನ್ನಲೆಯಲ್ಲಿ ಕಲಾಪವನ್ನು ಮುಂದೂಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


