

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕರಡಿಗುಡ್ಡ ಗ್ರಾಮದ ಬಳಿ ಬುಧವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ ಮತ್ತು ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಕರಡಿಗುಡ್ಡದ ಬಳಿ ಟಾಟಾ ಏಸ್ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದು ಬಂದಿದ್ದು, ಘಟನಾ ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರನ್ನು ಸುರೇಶ್(30), ದುರ್ಗಪ್ಪ(28), ಶಿವಪ್ಪ(31), ಮೆಹಬೂಬ್(33) ಹಾಗೂ ಹನುಮಂತ(30) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.