ಈಗಿನ ಸುದ್ದಿ

ನನಗೂ ಸಿಎಂ ಆಗೋ ಆಸೆ ಇತ್ತು: ಪರಮೇಶ್ವರ್

ನನಗೂ ಸಿಎಂ ಆಗೋ ಆಸೆ ಇತ್ತು: ಪರಮೇಶ್ವರ್
Published On :

ಬೆಂಗಳೂರು: ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇತ್ತು ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರು ಮನದಾಳದ ಮಾತನ್ನು ವ್ಯಕ್ತಪಡಿಸಿದ್ದಾರೆ.

ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾಗೋ ಆಸೆ ನನಗೂ ಇತ್ತು. ಆದರೆ ಸದ್ಯದ ಪರಿಸ್ಥಿತಿ ಆ ಸ್ಥಾನ ನನಗೆ ಸಿಗುವ ಸಾಧ್ಯತೆ ಇಲ್ಲ. ಹೀಗಾಗಿ ಸಹಜವಾಗಿ ಉಪಮುಖ್ಯಮಂತ್ರಿ ಹುದ್ದೆಯ ಮೇಲೆ ಆಸೆ ಇದೆ ಎಂದರು.

ಪಕ್ಷ ನನಗೆ ಕೊಟ್ಟ ಕೆಲಸವನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಹೀಗಾಗಿ ವರಿಷ್ಠರಿಗೆ ನನ್ನ ಮೇಲೆ ನಂಬಿಕೆ ಇದೆ ಎಂದರು. ಆದರೆ ಡಿಸಿಎಂ ಹುದ್ದೆ ಗಿಟ್ಟಿಸಿಕೊಳ್ಳಲು ಯಾವುದೇ ರೀತಿಯ ಲಾಭಿ ನಡೆಸಿಲ್ಲ ಎಂದರು. ಡಿಸಿಎಂ ಹುದ್ದೆ ಸಿಗದಿದ್ದರೂ ನಿರಾಶೆಗೊಳ್ಳುವುದಿಲ್ಲ ಪಕ್ಷ ಯಾವುದೇ ಹುದ್ದೆ ಕೊಟ್ಟರು ನಿಭಾಯಿಸುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಬೇಕಾದರು ಅದನ್ನು ಸಂಪೂರ್ಣವಾಗಿ ಪರಿಶೀಲಿಸಿ ನಂತರ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದರು.

ಅಸಮರ್ಥ ಸಚಿವರನ್ನು ಸಚಿವ ಸಂಪುಟದಿಂದ ಕೈಬಿಡುವ ವಿಚಾರ ಸಿಎಂ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಟ್ಟದ್ದು ಎಂದರು. ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್​ ಆದೇಶದಂತೆ ನಡೆದುಕೊಳ್ಳುತ್ತೇವೆ. ಉಪಚುನಾವಣೆಯ ನಂತರ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.

ಉಪ ಚುನಾವಣೆಯಲ್ಲಿ ಜೆಡಿಎಸ್’ನೊಂದಿಗೆ ಯಾವುದೇ ಹೊಂದಾಣಿಕೆ ಆಗಿಲ್ಲ ಎಂದೂ ಇದೇ ವೇಳೆ ಪರಮೇಶ್ವರ್ ಸ್ಪಷ್ಟಪಡಿಸಿದರು.

ಇದಕ್ಕೂ ಮೊದಲು ಶೇಷಾದ್ರಿಪುರಂನ ಅಂಧ ಮಕ್ಕಳ ಶಾಲೆಗೆ ಪತ್ನಿ ಸಮೇತ ಭೇಟಿ ನೀಡಿದ ಪರಮೇಶ್ವರ್​ ಅಂಧ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಿದರು. ಮತ್ತೊಂದೆಡೆ ಅಭಿಮಾನಿಗಳು ಪಟಾಕಿ ಸಿಡಿಸಿ, 50 ಕೆಜಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.