
ಬೆಂಗಳೂರು: 2011ನೇ ಸಾಲಿನ ಕೆಪಿಎಸ್‌ಸಿ ನೇಮಕಾತಿ ರದ್ದು ಮಾಡಿರುವ ಸರ್ಕಾರದ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಮಕಾತಿ ರದ್ದು ಮಾಡಿದ ಪ್ರಕರಣದಲ್ಲಿ ರಾಜ್ಯ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ. ಕಾನೂನಾತ್ಮಕವಾಗಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದರು.
ಪ್ರಕರಣ ಸಂಬಂಧ ತನಿಖೆ ನಡೆಸಿರುವ ಸಿಐಡಿ ಸಹ ನೇಮಕಾತಿಯಲ್ಲಿ ಅಕ್ರಮವಾಗಿದೆ ಎಂದು ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ಅಡ್ವೋಕೇಟ್ ಜನರಲ್ ಸಲಹೆ ಹಾಗೂ ಕಾನೂನು ಇಲಾಖೆಯ ಸಹಕಾರದೊಂದಿಗೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಭ್ರಷ್ಟಾಚಾರ ಸಾಬೀತುಗೊಂಡ ಹಿನ್ನೆಲೆಯಲ್ಲಿ 2011ರಲ್ಲಿ ಕೆಪಿಎಸ್‌ಸಿ ಮೂಲಕ ಆಯ್ಕೆಗೊಂಡ 362 ರಾಜ್ಯ ಪತ್ರಾಂಕಿತ ಅಧಿಕಾರಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಸಚಿವ ಸಂಪುಟ ಸಭೆ ರದ್ದುಗೊಳಿಸಿತ್ತು.
Advertisement