
ನವದೆಹಲಿ: ತಲೆಗೆ ಪೆಟ್ಟು ಬಿದ್ದು ಗಾಯಗೊಂಡಿರುವ ಮಾಜಿ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.
ಶುಕ್ರವಾರ ರಾತ್ರಿ ಸುಮಾರು 11 ಗಂಟೆಯಲ್ಲಿ ತಮ್ಮ ನಿವಾಸದಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪರಿಣಾಮ ತಲೆಗೆ ಜೋರಾಗಿ ಪೆಟ್ಟು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಚಿಕಿತ್ಸೆ ನೀಡಾಲುಗುತ್ತಿದೆ ಎಂದು ತಿಳಿದು ಬಂದಿದೆ.
76 ವರ್ಷದ ಜಸ್ವಂತ್ ಸಿಂಗ್ ಅವರನ್ನು ರಿಸರ್ಚ್ ಅಂಡ್ ರೆಫೆರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಧಿಕ ರಕ್ತಸ್ರಾವವಾಗುತ್ತಿದೆ. ಈ ಹಿನ್ನಲೆಯಲ್ಲಿ ವೈದ್ಯರು ಇಂದು ಆಫರೇಷನ್ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಪಕ್ಷದ ಹಿರಿಯ ಮುಖಂಡರಾಗಿದ್ದ ಜಸ್ವಂತ್ ಸಿಂಗ್ ಅವರಿಗೆ ಬಾರ್ಮರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿತ್ತು. ಇದರಿಂದ ಅಸಮಾಧಾನಗೊಂಡ ಜಸ್ವಂತ್ ಸಿಂಗ್ ಬಿಜೆಪಿಗೆ ಗುಡ್ ಬಾಯ್ ಹೇಳಿ, ಬಾರ್ಮರ್ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದರು.
Advertisement