ಈಗಿನ ಸುದ್ದಿ

ಮುಂಬೈನಲ್ಲಿ ಅಗ್ನಿ ಅವಘಡ: ಓರ್ವ ವಿದೇಶಿಗ ಸಾವು

ಮುಂಬೈನಲ್ಲಿ ಅಗ್ನಿ ಅವಘಡ: ಓರ್ವ ವಿದೇಶಿಗ ಸಾವು
Published On :

ಮುಂಬೈ: ಮುಂಬೈನ ವಾಂಟನ್ ಹೌಸ್ ಹೊಟೇಲ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಓರ್ವ ವಿದೇಶಿಗ ಮೃತಪಟ್ಟಿದ್ದು, ಘಟನೆಯಲ್ಲಿ ಸುಮಾರು 28 ಮಂದಿಗೆ ಗಾಯಗಳಾಗಿವೆ.

ಹೊಟೇಲ್‌ನಲ್ಲಿ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬೆಂಕಿಗೆ ಸಿಲುಕಿ ನೈಜೀರಿಯಾ ಮೂಲದ ವ್ಯಕ್ತಿಯೋರ್ವ ಮೃತಪಟ್ಟಿದ್ದು, ಇಬ್ಬರು ಜರ್ಮನ್ ದಂಪತಿಗಳು ಸೇರಿದಂತೆ 28 ಮಂದಿಗೆ ಸುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನು ಮುಂಬೈ ಮುನಿಸಿಪಲ್ ಕಾರ್ಪೋರೇಷನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳುಗಳನ್ನು ಪರೀಕ್ಷಿಸಿದ ವೈದ್ಯರು ಜರ್ಮನ್ ದಂಪತಿ ಸೇರಿ 14 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಹೊಟೇಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಹೊಗೆ ಆವರಿಸಿಕೊಂಡಿದ್ದರಿಂದ ಕಣ್ಣು ಕಾಣದೇ ಕೆಲವರು ಕೆಳಗೆ ಬಿದ್ದ ಕಾರಣ ಸಣ್ಣ ಪುಟ್ಟ ಗಾಯಗಳಾಗಿವೆ. ಅದರಲ್ಲಿ ಹೆಚ್ಚಾಗಿ ಆಕ್ಸೀಸ್ ಬ್ಯಾಂಕ್ ಹಾಗೂ ಹೊಟೇಲ್‌ಗೆ ಸೇರಿದ ಸಿಬ್ಬಂದಿಗಳಾಗಿದ್ದಾರೆ.

ಹೊಟೇಲ್‌ನಲ್ಲಿ ಅಳವಡಿಸಿರುವ ಎಸಿ ಡಕ್‌ನಲ್ಲಿ ಸಂಭವಿಸಿದ ಶಾರ್ಟ್ ಸಕ್ಯೂರ್ಟ್‌ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ ಎಂದು ಆರಂಭಿಕ ತನಿಖೆಯಿಂದ ತಿಳಿದು ಬಂದಿದೆ.

ಹೊಟೇಲ್ ವಾಂಟೆನ್ ಹೌಸ್‌ನಲ್ಲಿ ಬೆಳಗ್ಗೆ 4.45 ರಲ್ಲಿ ಬೆಂಕಿ ಕಾಣಿಸಿಕೊಂಡಿತು. ಸುದ್ದಿ ತಿಳಿದಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಸತತ 3 ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.