
ರಿಯಾದ್: ಮೆಹ್ರಾಬಾದ್ ಏರ್‌ಪೋರ್ಟ್‌ನಲ್ಲಿ ವಿಮಾನವೊಂದು ಪತನಗೊಂಡ ಪರಿಣಾಮ ವಿಮಾನದಲ್ಲಿದ್ದ 48 ಮಂದಿ ದುರ್ಮರಣ ಹೊಂದಿದ್ದಾರೆ.
ಇರಾನ್‌ನ ಟೆಹ್ರಾನ್ ಬಳಿಯ ಮೆಹ್ರಾಬಾದ್ ಏರ್‌ಪೋರ್ಟ್ ಬಳಿ ಇರಾನ್-141 ಏರ್ ಜೆಟ್‌ಲೈನರ್ ಪ್ರಯಾಣಿಕ ವಿಮಾನ ಟೇಕ್‌ಆಫ್ ಆದ ಕೆಲವೇ ನಿಮಿಷಗಳಲ್ಲೇ ಪತನಗೊಂಡಿದೆ. ಈ ದುರಂತದಲ್ಲಿ ಏಳು ಮಕ್ಕಳು ಸೇರಿದಂತೆ 48 ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ವಿಮಾನ ಟೇಕ್‌ಆಫ್ ಆಗುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು, ಬೆಂಕಿಯ ತೀವ್ರತೆಗೆ ಜೆಟ್‌ನ ಎಂಜಿನ್ ಸ್ಫೋಟಗೊಂಡಿದೆ. ಇದರಿಂದಾಗಿ ವಿಮಾನ ಧರೆಗುರುಳಿದೆ. ವಿಮಾನ ಅಪಘಾತಕ್ಕೀಡಾಗುತ್ತಿದ್ದಂತೆ ರಕ್ಷಣಾ ಕಾರ್ಯಾಚರಣೆಗೆ ಮುಂದಾದ ರಕ್ಷಣ ಸಿಬ್ಬಂದಿ ಅವಶೇಷಗಳಡಿಯಿಂದ 10 ಮೃತದೇಹವನ್ನು ಹೊರ ತೆಗೆದಿದ್ದು, ಕಾರ್ಯಾಚರಣೆ ಮುಂದುವರಿದಿದೆ.
Advertisement