
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ 2011ನೇ ಸಾಲಿನ ನೇಮಕಾತಿ ರದ್ದು ಪಡಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಪ್ರತಿಭಟನೆ ಭಾನುವಾರವೂ ಮುಂದುವರೆದಿದೆ.
ಕಳೆದ 22 ದಿನಗಳಿಂದ ಫ್ರೀಡಂಪಾರ್ಕ್‌ನಲ್ಲಿ ನೊಂದ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ತನ್ನ ಆದೇಶವನ್ನು ಹಿಂಪಡೆಯುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ. ಉಪವಾಸ ಸತ್ಯಾಗ್ರಹದಲ್ಲಿ ನಿರತರಾಗಿರುವ ಸುಮಾರು 16 ಮಂದಿ ಅಭ್ಯರ್ಥಿಗಳು ಅಸ್ವಸ್ಥರಾಗಿದ್ದು, ಅವರನ್ನು ಮಲ್ಲೇಶ್ವರಂನಲ್ಲಿರುವ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫ್ರೀಡಂಪಾರ್ಕ್‌ನಲ್ಲಿ ಬಿಗಿ ಬಂದೋಬಸ್ತ್
ಫ್ರೀಡಂಪಾರ್ಕ್‌ನಲ್ಲಿ ಅಭ್ಯರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಡಿಸಿಪಿ ಲಾಬೂರಾಮ್ ನೇತೃತ್ವದಲ್ಲಿ ಇಬ್ಬರು ಡಿಸಿಪಿ, ನಾಲ್ವರು ಎಸಿಪಿ, ಇನ್ಸ್‌ಪೆಕ್ಟರ್ 13 , ಸಬ್ ಇನ್ಸ್‌ಪೆಕ್ಟರ್ 18, ಹಾಗೂ 30 ಮಹಿಳಾ ಪೇದೆಗಳು ಸೇರಿದಂತೆ 200 ಜನ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ.
ಸರ್ಕಾರದ ವಿರುದ್ಧ ನೊಂದ ಅಭ್ಯರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕ ಕ್ರಮವಾಗಿ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇದೇ ವೇಳೆ ಪ್ರತಿಭಟನಾ ಸ್ಥಳದಲ್ಲಿ 1 ಜಲಫಿರಂಗಿಯನ್ನು ಸಹ ನಿಯೋಜನೆಗೊಂಡಿದೆ.
Advertisement