
ಬೆಳಗಾವಿ: ವಿಧಾನಸಭಾ ಉಪಚುನಾವಣಾ ಮತಎಣೆಕೆ ಕಾರ್ಯ ಮುಕ್ತಾಯವಾಗಿದ್ದು, ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿದೆ.
ಕಾಂಗ್ರೆಸ್ ಪಕ್ಷದ ಗಣೇಶ್ ಹುಕ್ಕೇರಿ ಅವರು ಒಟ್ಟು 31, 870 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಎಲ್ಲ 18 ಸುತ್ತಿನ ಮತಎಣಿಕೆ ಕಾರ್ಯ ಮುಗಿದಿದ್ದು, ಬಿಜೆಪಿಯ ಮಹಾಂತೇಶ ಕವಾಟಗಿಮಠ ಅವರು ತೀವ್ರ ಮುಖಭಂಗ ಅನುಭವಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಕವಟಗಿಮಠ ಅವರು ಒಟ್ಟು 32, 816 ಮತಗಳನ್ನು ಗಳಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಗಣೇಶ್ ಹುಕ್ಕೇರಿ ಅವರು 94, 636 ಮತಗಳನ್ನು ಗಳಿಸಿದ್ದಾರೆ. ಆ ಮೂಲಕ ಒಟ್ಟು 31, 870 ಮತಗಳ ಅಂತರದಿಂದ ಗಣೇಶ್ ಹುಕ್ಕೇರಿ ಅವರು ಭರ್ಜರಿ ಜಯ ದಾಖಲಿಸಿದ್ದಾರೆ.
Advertisement