
ಶಿವಮೊಗ್ಗ: ಶಿಕಾರಿಪುರ ವಿಧಾನಸಭಾ ಉಪಚುನಾವಣೆಯಲ್ಲಿ ಮಾಜಿ ಸಂಸದ ಬಿ.ವೈ.ರಾಘವೇಂದ್ರ ಅವರು ಗೆಲುವು ದಾಖಲಿಸಿದ್ದಾರೆ.
ಮತಎಣಿಕೆಯ ಆರಂಭದ ಹಂತದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದು ಬಂದಿದ್ದ ರಾಘವೇಂದ್ರ ಅವರು ಅಂತಿಮವಾಗಿ ಗೆಲುವು ಸಾಧಿಸಿದ್ದಾರೆ. ಈಗಾಗಲೇ ಎಲ್ಲ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಮಗ ಬಿ.ವೈ.ರಾಘವೇಂದ್ರ ಅವರು ಸುಮಾರು 6 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ರಾಘವೇಂದ್ರ ಅವರು ಒಟ್ಟು 71, 547 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಪಕ್ಷದ ಶಾಂತವೀರಪ್ಪಗೌಡ ಅವರು 65, 117 ಮತಗಳನ್ನು ಪಡೆದುಕೊಂಡಿದ್ದಾರೆ. ಆ ಮೂಲಕ ರಾಘವೇಂದ್ರ ಅವರ ವಿರುದ್ಧ 6, 430 ಮತಗಳ ಅಂತರದಿಂದ ಸೋಲುಂಡಿದ್ದಾರೆ.
ರಾಘವೇಂದ್ರ ಅವರಿಗೆ ಕಾಂಗ್ರೆಸ್ ಪಕ್ಷ ಶಾಂತವೀರಪ್ಪಗೌಡ ಅವರು ತೀವ್ರ ಪೈಪೋಟಿ ನೀಡಿದರಾದರೂ ಅಂತಿಮವಾಗಿ 65, 117 ಮತಗಳನ್ನು ಗಳಿಸಲಷ್ಟೇ ಶಕ್ತರಾದರು. ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಈಗಾಗಲೇ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
Advertisement