ಈಗಿನ ಸುದ್ದಿ

ಆಪ್ ಮಹಿಳೆಯರನ್ನು ಮನುಷ್ಯರಂತೆ ನೋಡುತ್ತಿಲ್ಲ: ಮಧು ಬಾಧುರಿ

Published On :

ನವದೆಹಲಿ: ಆಮ್ ಆದ್ಮಿ ಪಕ್ಷ(ಎಎಪಿ)ದ ಸಂಸ್ಥಾಪಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿರುವ ಎಎಪಿ ಮಾಜಿ ಸಂಸ್ಥಾಪಕ ಸದಸ್ಯೆ ಮಧು ಬಾಧುರಿ ಅವರು, ಎಎಪಿ ಮಹಿಳೆಯನ್ನು ಮನುಷ್ಯರಂತೆ ನೋಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪ್‌ನಲ್ಲಿ ಮಹಿಳೆಯರನ್ನು ಕಡೆಗಣಿಸಲಾಗಿದೆ. ಮಹಿಳೆಯನ್ನು ಮನುಷ್ಯರಂತೆ ಕಾಣುತ್ತಿಲ್ಲ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ದೆಹಲಿ ಸಿಎಂ ಕೇಜ್ರಿವಾಲ್ ಅವರು ಜನತೆಗೆ ನೀಡಿದ್ದ ಭರವಸೆಯನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಎಎಪಿ ಅಧಿಕಾರಕ್ಕೆ ಬಂದಾಗಿನಿಂದ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದೆ. ಇದಕ್ಕೂ ಮುನ್ನ ಆಪ್ ವಿರುದ್ದ ಕಿಡಿಕಾರಿದ್ದ ಶಾಸಕ ಬಿನ್ನಿ, ತಮ್ಮ ಅಸಮಧಾನವನ್ನು ವ್ಯಕ್ತಪಡಿಸಿದ್ದರು. ಅಲ್ಲದೆ ಪಕ್ಷ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಸೋತಿದ್ದು, ಆಪ್ ಅಧಿಕಾರ ಕಳೆದುಕೊಳ್ಳುತ್ತದೆ ಎಂದಿದ್ದರು.

ಇದೀಗ ಎಎಪಿ ಸಂಸ್ಥಾಪಕ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಮಧು ಬಾಧುರಿ ಸಹ ಆಪ್ ವಿರುದ್ಧ ಕಿಡಿಕಾರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.