ಈಗಿನ ಸುದ್ದಿ

ಸಿಪಿಐನೊಂದಿಗೆ ಅಣ್ಣಾ ಡಿಎಂಕೆ ಮೈತ್ರಿ

ಸಿಪಿಐನೊಂದಿಗೆ ಅಣ್ಣಾ ಡಿಎಂಕೆ ಮೈತ್ರಿ
Published On :

ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅಣ್ಣಾ ಡಿಎಂಕೆ ಪಕ್ಷದ ಮುಖ್ಯಸ್ಥೆ ಮತ್ತು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಸಿಪಿಐ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ.

ಚೆನ್ನೈನಲ್ಲಿರುವ ಜಯಲಲಿತಾ ನಿವಾಸದಲ್ಲಿ ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಜಯಲಿಲಾತ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯನ್ನು ಅಣ್ಣಾಡಿಎಂಕೆ ಮತ್ತು ಸಿಪಿಐ ಪಕ್ಷಗಳು ಒಟ್ಟಾಗಿ ಎದುರಿಸಲು ತೀರ್ಮಾನಿಸಿದ್ದೇವೆ. ತಮಿಳುನಾಡು ಮತ್ತು ಪುದುಚೇರಿಯಲ್ಲಿ 40 ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿಯಾಗಿದ್ದು, ಶಾಂತಿ, ಸಮೃದ್ಧಿ, ಪ್ರಗತಿ ಎನ್ನುವುದು ನಮ್ಮ ಮೈತ್ರಿಕೂಟದ ಘೋಷಣಾವಾಕ್ಯವಾಗಿದೆ ಎಂದು ಜಯಲಲಿತಾ ಹೇಳಿದರು. ಇದೇ ವೇಳೆ ಸಭೆಯಲ್ಲಿ ಉಪಸ್ಥಿತರಿದ್ದ ಸಿಪಿಐ ಮುಖಂಡರಾದ ಎ.ಬಿ.ಬರ್ಧನ್ ಮತ್ತು ಸುಧಾಕರ್ ರೆಡ್ಡಿ ಅವರು ಮೈತ್ರಿ ವಿಚಾರವನ್ನು ಒಪ್ಪಿಕೊಂಡರು.

ಇದೇ ವೇಳೆ ನೂತನ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬರ್ಧನ್ ಅವರು, ಚುನಾವಣೆಯಲ್ಲಿ ನಾವು ಜಯಗಳಿಸಿದ ನಂತರ ಆ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.