ಶಿವಮೊಗ್ಗದಿಂದ ಲೋಕಸಭೆಗೆ ಬಿಎಸ್‌ವೈ ಸ್ಪರ್ಧೆ

ಶಿವಮೊಗ್ಗ: ಮುಂದಿನ ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಂಗಳವಾರ ಘೋಷಿಸಿದ್ದಾರೆ.
ಇಂದು ಶಿಕಾರಿಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಯಡಿಯೂರಪ್ಪ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬಿಜೆಪಿ ವರಿಷ್ಠರು, ಕಾರ್ಯಕರ್ತರ ಒತ್ತಾಯ ಮೇರೆಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ಕೆಜೆಪಿ ವಿಲೀನ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು, ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದ್ದರು. ಇದೀಗ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿ ಬಿಎಸ್‌ವೈ ಅಚ್ಚರಿ ಮೂಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


