ಈಗಿನ ಸುದ್ದಿ

ಸಿಎನ್‌ಆರ್ ರಾವ್, ಸಚಿನ್‌ಗೆ 'ಭಾರತ ರತ್ನ' ಪ್ರದಾನ

ಸಿಎನ್‌ಆರ್ ರಾವ್, ಸಚಿನ್‌ಗೆ 'ಭಾರತ ರತ್ನ' ಪ್ರದಾನ
Published On :

ನವದೆಹಲಿ: ಖ್ಯಾತ ವಿಜ್ಞಾನಿ ಪ್ರೊಫೆಸರ್ ಸಿಎನ್‌ಆರ್ ರಾವ್ ಹಾಗೂ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರಿಗೆ ಮಂಗಳವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಭಾರತ ರತ್ನ' ಪ್ರದಾನ ಮಾಡಿದರು.

ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಶದ ಪ್ರಥಮ ಪ್ರಜೆ ಪ್ರಣಬ್ ಮುಖರ್ಜಿ ಅವರು, ದೇಶದ ಎರಡು ರತ್ನಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಕ್ರೀಡಾ ಕ್ಷೇತ್ರದಲ್ಲಿನ ಅಪೂರ್ವ ಸಾಧನೆಗಾಗಿ ಸಚಿನ್ ತೆಂಡೂಲ್ಕರ್ ಅವರಿಗೆ ಹಾಗೂ ವಿಜ್ಞಾನ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಗಾಗಿ ಸಿಎನ್‌ಆರ್ ರಾವ್ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.