ಆಂಧ್ರ ವಿಭಜನೆ ಶಾಂತಿಯುತವಾಗಿರಬೇಕು: ಪ್ರಧಾನಿ ಸಿಂಗ್

ನವದೆಹಲಿ: ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ಪ್ರಕ್ರಿಯೆ ಶಾಂತಿಯುತವಾಗಿ ನೆರವೇರಬೇಕು ಎಂದು ಪ್ರಧಾನಿ ಮನಮೋಹನ್ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮನಮೋಹನ್ ಸಿಂಗ್ ಅವರು, ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಕೇಂದ್ರಸರ್ಕಾರ ಬದ್ಧವಾಗಿದೆ. ಆದರೆ ಆಂಧ್ರ ವಿಭಜನೆ ಕಾರ್ಯವು ಶಾಂತಿಯುತವಾಗಿ ನಡೆಯಬೇಕು ಎಂದು ಅವರು ಮನವಿ ಮಾಡಿದರು. 'ಈ ಸಂದರ್ಭದಲ್ಲಿ ನಾನು ಏನೇ ಹೇಳಿದರು ಅವರು (ಸೀಮಾಂಧ್ರ ಜನತೆ) ಭಾವೋದ್ವೇಗಕ್ಕೊಳಗಾಗಬಹುದು. ಹೀಗಾಗಿ ನಾನು ಏನನ್ನು ಹೇಳುವುದಿಲ್ಲ. ಆದರೆ ಆಂಧ್ರ ವಿಭಜನೆ ಕಾರ್ಯವು ಶಾಂತಿಯುತವಾಗಿ ನಡೆಯಬೇಕು' ಎಂದು ಪ್ರಧಾನಿ ಸಿಂಗ್ ಹೇಳಿದರು.
ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ವಿರುದ್ಧ ಸೀಮಾಂದ್ರ ಶಾಸಕ ಮತ್ತು ಸಂಸದರು ನಡೆಸುತ್ತಿರುವ ಪ್ರತಿಭಟನೆ ತಾರಕಕ್ಕೇರಿದ್ದು, ಇಂದು ಸಂಸತ್ ಭವನದ ನಾರ್ಥ್ ಬ್ಲಾಕ್ ಗೇಟ್ ಮುಂದೆ ಅವರು ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿದ್ದ ಟಿಆರ್‌ಎಸ್ ಮುಖಂಡ ಕೆ.ಚಂದ್ರಶೇಖರ ರಾವ್ ಅವರು ತೆಲಂಗಾಣ ರಾಜ್ಯ ರಚನೆ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಮನವಿ ಸಲ್ಲಿಸಿದರು.
ಭೇಟಿ ನಂತರ ಮಾತನಾಡಿದ ಪ್ರಧಾನಿ ಸಿಂಗ್ ಅವರು, 'ಸಂಸತ್ತಿನಲ್ಲಿ ತೆಲಂಗಾಣ ಮಸೂದೆ ಸೇರಿದಂತೆ ಹಲವು ಪ್ರಮುಖ ಮಸೂದೆಗಳ ಅನುಮೋದನೆ ಪಡೆಯಬೇಕಿದೆ. ಅಲ್ಲದೆ ಈ ಬಾರಿಯ ಸಂಸತ್ ಕಲಾಪವು ಲೋಕಸಭಾ ಚುನಾವಣೆಗೂ ಮುನ್ನ ನಡೆಯುವ ಕೊನೆಯ ಕಲಾಪವಾಗಿದ್ದು, ಭ್ರಷ್ಟಾಚಾರ ನಿಯಂತ್ರಣ ಮಸೂದೆ, ಕೋಮುಗಲಭೆ ನಿಯಂತ್ರಕ ಮಸೂದೆ, ಮಹಿಳಾ ಮೀಸಲಾತಿ ಮಸೂದೆಗಳಿಗೆ ಅನುಮೋದನೆ ಪಡೆಯಲಿದ್ದೇವೆ ಎಂದು ಪ್ರಧಾನಿ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


