ಖಾಪ್ ಪಂಚಾಯತ್ ನಮ್ಮ ಸಂಸ್ಕೃತಿಯ ಭಾಗವಾಗಲ್ಲ: ಚಿದಂಬರಂ
ನವದೆಹಲಿ: ಖಾಪ್ ಪಂಚಾಯತ್ನ್ನು ಸಮರ್ಥಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ತಿರುಗೇಟು ನೀಡಿದ ವಿತ್ತ ಸಚಿವ ಪಿ.ಚಿದಂಬರಂ ಖಾಪ್ ಪಂಚಾಯತ್ ವಿಮುಖವಾದ ಸಂಘಟನೆಯಾಗಿದ್ದು, ಇದು ಭಾರತೀಯ ಸಂಸ್ಕೃತಿಯ ಭಾಗವಲ್ಲ ಎಂದು ಹೇಳಿದ್ದಾರೆ.
ಖಾಪ್ ಪಂಚಾಯತ್ ಅಂದರೆ ಏನು? ಅದೊಂದು ವಿಮುಖವಾದ ಸಂಘಟನೆ. ಇದು ನಮ್ಮ ಸಂಸ್ಕೃತಿಯ ಭಾಗವಲ್ಲ. ಇದನ್ನು ನಮ್ಮ ಸಂಸ್ಕೃತಿಯ ಭಾಗವೆಂದು ಹೇಳುವವರ ಬಗ್ಗೆ ನನಗೆ ಅಂಜಿಕೆಯಿದೆ. ಅದು ಹೇಗೆ ಭಾರತದ ಸಂಸ್ಕೃತಿಯ ಭಾಗವಾಗುತ್ತದೆ? ಎಂದು ಶ್ರೀರಾಂ ಕಾಲೇಜ್ ಆಫ್ ಕಾಮರ್ಸ್ನಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಚಿದಂಬರಂ ಹೇಳಿದ್ದಾರೆ.
ಖಾಪ್ ಪಂಚಾಯತ್ಅಥವಾ ಚುನಾಯಿತವಲ್ಲದ ಗ್ರಾಮ ಪಂಚಾಯಿತಿ ವ್ಯವಸ್ಥೆಗಳನ್ನು ನಿಷೇಧಿಸುವ ಅಗತ್ಯವಿಲ್ಲ. ಅವೆಲ್ಲವೂ ನಮ್ಮ ಸಂಸ್ಕೃತಿಯ ಭಾಗಗಳಾಗಿವೆ ಎಂದು ಕೇಜ್ರಿವಾಲ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

