ಈಗಿನ ಸುದ್ದಿ

ಲೋಕಸಭೆ ಚುನಾವಣೆ ಫಲಿತಾಂಶ ಅಚ್ಚರಿ ತರಲಿದೆ: ಮೋದಿ

ಲೋಕಸಭೆ ಚುನಾವಣೆ ಫಲಿತಾಂಶ ಅಚ್ಚರಿ ತರಲಿದೆ: ಮೋದಿ
Published On :

ಕೋಲ್ಕತಾ: ಮುಂದಿನ ಲೋಕಸಭಾ ಚುನಾವಣೆ ಫಲಿತಾಂಶ ಅಚ್ಚರಿ ತರಲಿದೆ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ಹಾಗೂ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ.

ಇಂದು ಕೋಲ್ಕತಾದಲ್ಲಿ ಬಿಜೆಪಿ 'ಜನ ಚೇತನ' ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಲೋಕಸಭಾ ಚುನಾವಣೆ ಫಲಿತಾಂಶ ಅಚ್ಚರಿಯಾಗಲಿದೆ ಮತ್ತು ರಾಜಕೀಯ ಪಂಡಿತರ ಲೆಕ್ಕಾಚಾರ ತಲೆಕೆಳಗಾಗಲಿದೆ ಎಂದಿದ್ದಾರೆ.

ದೇಶದ ಜನತೆ ತಮ್ಮ ಹಕ್ಕನ್ನು ಚಲಾಯಿಸಲು ಬಯಸುತ್ತಾರೆ. ನಾನು ಪ್ರಜೆಗಳ ಹಕ್ಕನ್ನು ನೀಡಲು ಬಂದಿದ್ದೇನೆ ಎಂದು ಮೋದಿ ಹೇಳಿದರು.

ಇದೇ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಮೋದಿ, ಮಮತಾ ಬ್ಯಾನರ್ಜಿ ಅವರಿಗೆ ಮತ ಹಾಕಿದರೆ ವ್ಯರ್ಥವಾಗುತ್ತೆ. ಹೀಗಾಗಿ ನಿಮ್ಮ ಮತವನ್ನು ಬಿಜೆಪಿಗೆ ಹಾಕಿ ಸಾರ್ಥಕಪಡಿಸಿಕೊಳ್ಳಿ ಎಂದು ಮೋದಿ ಕಾರ್ಯಕರ್ತರಿಗೆ ಕರೆ ನೀಡಿದರು.

ಪಶ್ಚಿಮ ಬಂಗಾಳದಲ್ಲಿ ಶಿಕ್ಷಣ ಗುಣಮಟ್ಟ ಕುಸಿದಿದೆ. ಇಲ್ಲಿನ ಕಾರ್ಮಿಕರ ಸ್ಥಿತಿ ಬದಲಾಗಿಲ್ಲ ಮತ್ತು ಇಲ್ಲಿ ಹೆಚ್ಚು ಕಲ್ಲಿದ್ದಲು ನಿಕ್ಷೇಪವಿದ್ದರೂ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇದೆ. ರಾಜ್ಯದಲ್ಲಿ ಹೇರಳವಾದ ನೈಸರ್ಗಿಕ ಸಂಪತ್ತಿದ್ದರೂ ಯಾವುದೇ ಅಭಿವೃದ್ಧಿಯಾಗಿಲ್ಲ. ಹೀಗಾಗಿ ಬಿಜೆಪಿ ಮತ ನೀಡಿ, ನಮ್ಮಿಂದಲೂ ಪ್ರತಿಫಲ ಬಯಸಿ. ಪಶ್ಚಿಮ ಬಂಗಾಳದ ಎಲ್ಲ ಸ್ಥಾನಗಳಲ್ಲೂ ಬಿಜೆಪಿ ಗೆಲ್ಲಿಸಿ, ನಾವು ರಾಜ್ಯವನ್ನು ಅಭಿವೃದ್ಧಿ ಮಾಡುತ್ತೇವೆ ಎಂದು ಮೋದಿ ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.