ಕೇಜ್ರಿವಾಲ್ 10 ಕೋಣೆಯ ಬಂಗ್ಲೆ ಕೇಳಿದ್ದರಂತೆ!
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇದೀಗ ಮತ್ತೊಂದು ವಿವಾದಕ್ಕೀಡಾಗಿದ್ದಾರೆ. ಸರಳ ಹಾಗು ನಿಷ್ಠ ಸರ್ಕಾರವನ್ನು ನಿರ್ವಹಿಸುವುದಾಗಿ ಭರವಸೆ ನೀಡಿದ್ದ ಕೇಜ್ರಿವಾಲ್ ಮುಖ್ಯಮಂತ್ರಿಯಾದಾಗ ತನಗೆ ಬಂಗ್ಲೆ ಬೇಕೆಂದು ಕೇಳಿದ್ದರು ಎಂಬುದು ಸದ್ಯದ ಸುದ್ದಿ.
ಕೆಲವೊಂದು ಸುದ್ದಿಮೂಲಗಳ ಪ್ರಕಾರ ಕೇಜ್ರಿವಾಲ್ಗೆ ಬಂಗ್ಲೆ ಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿಯವರ ಕಚೇರಿಯಿಂದ ಲೆ. ಗವರ್ನರ್ ನಜೀಬ್ ಜಂಗ್ ಅವರಿಗೆ ಪತ್ರ ರವಾನೆಯಾಗಿದೆ. ಈ ಪತ್ರವನ್ನು ದೆಹಲಿ ಮುಖ್ಯಮಂತ್ರಿಯವರ ಕಾರ್ಯದರ್ಶಿಯವರು ಬರೆದಿದ್ದಾರೆ ಎನ್ನಲಾಗುತ್ತಿದೆ.
ದೆಹಲಿ ಮುಖ್ಯಮಂತ್ರಿಯಾಗಿ ಕೇಜ್ರಿವಾಲ್ ಅವರು ಅಧಿಕಾರ ಸ್ವೀಕರಿಸಿದ 48 ಗಂಟೆಗಳಲ್ಲಿಯೇ ತಮಗೆ 10 ಕೋಣೆಯ ಬಂಗ್ಲೆ ಬೇಕೆಂಬ ಬೇಡಿಕೆಯನ್ನೊಡ್ಡಿದ್ದರು ಎಂದು ಸುದ್ದಿ ಪತ್ರಿಕೆಯೊಂದು ವರದಿ ಮಾಡಿದೆ.
ಭಗವಾನ್ ದಾಸ್ ರೋಡ್ನಲ್ಲಿ 10 ಕೋಣೆಯ ಬಂಗ್ಲೆ ಬೇಕೆಂದು ಕೇಜ್ರಿವಾಲ್ ಹೇಳಿದ್ದು, ಕೊನೆಗೆ ಈ ವಿಷಯ ಬಹಿರಂಗಗೊಂಡಾಗ ಕೇಜ್ರಿವಾಲ್ ಬಂಗ್ಲೆ ಬೇಡ ಎಂಬ ನಿರ್ಧಾರವನ್ನು ಕೈಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

