ಈಗಿನ ಸುದ್ದಿ

ಪ್ರಣಬ್ ಪ್ರಧಾನಿಯಾಗಲು ಕಾಂಗ್ರೆಸ್ ಬಿಡಲಿಲ್ಲ: ಮೋದಿ

ಪ್ರಣಬ್ ಪ್ರಧಾನಿಯಾಗಲು ಕಾಂಗ್ರೆಸ್ ಬಿಡಲಿಲ್ಲ: ಮೋದಿ
Published On :

ಕೊಲ್ಕತ್ತಾ: ಕಾಂಗ್ರೆಸ್ ಪಕ್ಷ ಕುಟುಂಬ ರಾಜಕೀಯವನ್ನು ಮುಂದುವರಿಸುತ್ತಾ ಬರುತ್ತಿದ್ದು, ಕಾಂಗ್ರೆಸ್ ಪಕ್ಷವು  ಹಿರಿಯ ನಾಯಕ ಪ್ರಣಬ್ ಮುಖರ್ಜಿ ಅವರು ದೇಶದ ಮಹೋನ್ನತ ಸ್ಥಾನ ಅಲಂಕರಿಸುವ ಆಸೆಗೆ ತಣ್ಣೀರೆರಚಿದೆ ಎಂದು ಮೋದಿ ಆರೋಪಿಸಿದ್ದಾರೆ.

ಇದೀಗ ರಾಷ್ಟ್ರಪತಿಯಾಗಿರುವ  ಪ್ರಣಬ್ ಮುಖರ್ಜಿ ಹಿರಿಯ ಕಾಂಗ್ರೆಸ್ ನಾಯಕರಾಗಿದ್ದಾರೆ. 1984ರಲ್ಲಿ ಆಗಿನ  ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯ ನಂತರ ಕೇಂದ್ರ ಸಂಪುಟದಲ್ಲಿರುವ ಅತೀ ಹಿರಿಯ ನಾಯಕರಾಗಿದ್ದಾರೆ ಪ್ರಣಬ್. ಆದರೆ ನೆಹರು- ಗಾಂಧಿ ಕುಟುಂಬ ರಾಜಕಾರಣದಿಂದಾಗಿ ಅವರು ಪ್ರಧಾನಿಯಾಗುವ ಅವಕಾಶ ಕೈತಪ್ಪಿ ಹೋಯ್ತು. ಒಂದು ವೇಳೆ ಅವರು ಪ್ರಧಾನಿಯಾಗುತ್ತಿದ್ದರೆ ದೇಶ ಉತ್ತಮವಾಗುತ್ತಿತ್ತು ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಅದೇ ವೇಳೆ ಈ ಅನ್ಯಾಯವನ್ನು ಮನಸ್ಸಲ್ಲಿಟ್ಟುಕೊಂಡು 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಿ ಎಂದು ಮೋದಿ ಬಂಗಾಳದ ಜನತೆಯಲ್ಲಿ ಬಿನ್ನವಿಸಿಕೊಂಡಿದ್ದಾರೆ.

ರಾಜೀವ ಗಾಂಧಿ ಹತ್ಯೆಯಾದಾಗಲೂ ಪ್ರಣಬ್ ಅವರಿಗೆ ಪ್ರಧಾನಿಯಾಗುವ ಅವಕಾಶ ಇತ್ತು. ಆದರೆ ಅಲ್ಲಿಯೂ ಕೈ ತಪ್ಪಿ ಹೋಯ್ತು ಎಂದು ಮೋದಿ ಹೇಳಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರಸ್ ಅಧಿಕಾರಕ್ಕೆ ಬಂದರೆ ಮುಂದಿನ ಪ್ರಧಾನಿಯನ್ನು ಪ್ರಜಾಪ್ರಭುತ್ವ ರೀತಿಯಲ್ಲೇ ಆಯ್ಕೆ ಮಾಡಲಾಗುವುದು ಎಂದು ಹೇಳಿರುವ ಬಗ್ಗೆ ಮೋದಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿ ಈ ರೀತಿ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.