ಜನಲೋಕ ಪಾಲ ಮಸೂದೆ ಅಂಗೀಕಾರಕ್ಕೆ ಕೇಂದ್ರದ ಅನುಮತಿ ಬೇಡ: ಕೇಜ್ರಿವಾಲ್
ನವದೆಹಲಿ: ಸಚಿವ ಸಂಪುಟದಲ್ಲಿ ಜನಲೋಕಪಾಲ ಮಸೂದೆ ಅಂಗೀಕಾರಕ್ಕೆ ಕೇಂದ್ರ ಸರ್ಕಾರದ ಅನುಮತಿ ಬೇಡ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಯಾವುದೇ ಮಸೂದೆಯನ್ನು ಮಂಜೂರು ಮಾಡುವ ಮುನ್ನ ಕೇಂದ್ರ ಸರ್ಕಾರದ ಒಪ್ಪಿಗೆ ಬೇಕೆಂದು ಸಂವಿಧಾನದಲ್ಲಿ ಹೇಳಿಲ್ಲ. ಅದೇ ವೇಳೆ ಜನರಿಂದಲೇ ಆಯ್ಕೆಯಾಗಿರುವ ಸರ್ಕಾರ ಮಸೂದೆ ಮಂಜೂರು ಮಾಡಬೇಕಾದರೆ ಕೇಂದ್ರ ಸರ್ಕಾರದ ಒಪ್ಪಿಗೆ ಅಗತ್ಯವೆ? ಎಂದು ಆಪ್ ನಾಯಕ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಕೇಜ್ರಿವಾಲ್ ಶುಕ್ರವಾರ ಲೆ.ಗವರ್ನರ್ ನಜೀಬ್ ಜಂಗ್ ಅವರಿಗೆ ಪತ್ರವನ್ನೂ ಬರೆದಿದ್ದಾರೆ.
ಕಾಂಗ್ರೆಸ್ ಮತ್ತು ಗೃಹ ಸಚಿವಾಲಯದಿಂದ ಲೆ.ಗವರ್ನರ್ ತುಂಬಾ ಒತ್ತಡ ಅನುಭವಿಸುತ್ತಿದ್ದಾರೆ ಎಂಬುದಾಗಿಯೂ ಕೇಜ್ರಿವಾಲ್ ಹೇಳಿದ್ದಾರೆ.
ತಮಗೆ ಕಾಂಗ್ರೆಸ್ ಮತ್ತು ಗೃಹ ಸಚಿವಾಲಯದ ಒತ್ತಡವಿದೆ ಎಂಬುದು ನನಗೆ ಗೊತ್ತು. ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ವಿಧಾನಸಭಾ ಅಧಿವೇಶನ ನಡೆಸಲು ಅನುಮತಿ ನೀಡಬಾರದೆಂದು ಅವರು ನಿಮ್ಮ ಮೇಲೆ ಒತ್ತಡವನ್ನು ಹೇರುತ್ತಿದ್ದಾರೆ.
ನೀವೀಗ ಆ ಒತ್ತಡವನ್ನು ಮೀರಿ ನಿಲ್ಲಲು ಸಾಧ್ಯವೇ? ಎಂಬುದನ್ನು ನೀವೇ ನಿರ್ಧರಿಸಬೇಕಾಗಿದೆ. ನೀವು ಒಬ್ಬ ಒಳ್ಳೆಯ ವ್ಯಕ್ತಿ. ನೀವು ಯಾವುದೇ ಪಕ್ಷ ಅಥವಾ ಗೃಹ ಸಚಿವಾಲಯದ ಒತ್ತಡಕ್ಕೆ ಮಣಿಯದೆ ಸಂವಿಧಾನವನ್ನು ರಕ್ಷಿಸುವುದಾಗಿ ಪ್ರಮಾಣಗೈದವರು ಎಂದು ಕೇಜ್ರಿವಾಲ್ ತಮ್ಮ ಪತ್ರದಲ್ಲಿ ಬರೆದಿದ್ದಾರೆ.
ಏತನ್ಮಧ್ಯೆ, ಮಸೂದೆ ಬಗ್ಗೆ ಕಾನೂನು ಸಲಹೆ ಕೇಳುವ ಮುನ್ನ ದೆಹಲಿ ಸರ್ಕಾರವನ್ನು ಸಂಪರ್ಕಿಸದೇ ಇರುವ ಜಂಗ್ ಅವರ ನಡೆಯನ್ನು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

