ಮುಖ್ಯಮಂತ್ರಿಗಳನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ? : ಪವಾರ್

ಥೇನ್: ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳನ್ನ ಭೇಟಿ ಮಾಡುವುದರಲ್ಲಿ ತಪ್ಪೇನಿದೆ ಎಂದು ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಪ್ರಶ್ನಿಸಿದ್ದಾರೆ.
ಇತ್ತೀಚೆಗೆ ಶರದ್ ಪವಾರ್ ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿದ್ದರು. ಈ ಹಿನ್ನಲೆಯಲ್ಲಿ ಪವಾರ್ ಅವರ ಮೇಲೆ ಕೆಲವು ಅನುಮಾನಗಳು ಹುಟ್ಟಿಕೊಂಡಿದ್ದವು. ಇದನ್ನು ಜನರು, ಪ್ರತಿಪಕ್ಷದ ನಾಯಕರು ಪ್ರಶ್ನಿಸತೊಡಗಿದರು.
ಇದಕ್ಕೆ ಪ್ರತಿಕ್ರಿಯಿಸಿರುವ ಶರದ್ ಪವಾರ್, ಮುಖ್ಯಮಂತ್ರಿಗಳನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ. ಕೃಷಿ ಸಚಿವನಾಗಿರುವ ನನಗೆ ಕೆಲವು ಜವಬ್ದಾರಿಗಳಿವೆ. ಆಹಾರ ಭದ್ರತೆ ಕಾಯ್ದೆ ಬಗ್ಗೆ ಹೆಚ್ಚಿನ ಮಾಹಿತಿ ನೀಡಬೇಕಾಗಿದೆ. ಆದ್ದರಿಂದ ಪ್ರತಿ ರಾಜ್ಯದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕೃಷಿಗೆ ಸಂಬಂಧಿಸಿದಂತೆ ಕಾಯ್ದೆಗಳ ಬಗ್ಗೆ ಚರ್ಚಿಸಲಾಗುತ್ತಿದೆ. ಇದರಲ್ಲಿ ತಪ್ಪೇನಿದೆ ಎಂದು ಪವಾರ್ ಪ್ರಶ್ನಿಸಿದ್ದಾರೆ.
ಪಾಕಿಸ್ತಾನ ಮತ್ತು ಚೀನಾದ ಮಂತ್ರಿಗಳನ್ನು ನಾನು ಭೇಟಿ ಮಾಡಿಲ್ಲ. ನಾನು ಭೇಟಿ ಮಾಡುತ್ತಿರುವುದು ನಮ್ಮ ದೇಶದ ಮುಖ್ಯಮಂತ್ರಿಗಳನ್ನಾ. ಇದರಲ್ಲಿ ಯಾವುದೇ ರೀತಿಯ ತಪ್ಪಿಲ್ಲ ಎಂದು ಹೇಳಿದ್ದಾರೆ.
ಜನವರಿ 17ರಂದು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಶರದ್ ಪವಾರ್ ಅವಹರು ಗೌಪ್ಯವಾಗಿ ಭೇಟಿಯಾಗಿದ್ದರು ಎಂದು ವರದಿ ಮಾಡಲಾಗಿತ್ತು. ಈ ಹಿನ್ನಲ್ಲೆಯಲ್ಲಿ ಪವಾರ್ ವಿವಾದಕ್ಕೀಡಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


