ಈಗಿನ ಸುದ್ದಿ

ಆಂಧ್ರ ಪುನರ್ ರಚನಾ ಮಸೂದೆಗೆ ರಾಷ್ಟ್ರಪತಿ ಅಂಕಿತ

ಆಂಧ್ರ ಪುನರ್ ರಚನಾ ಮಸೂದೆಗೆ ರಾಷ್ಟ್ರಪತಿ ಅಂಕಿತ
Published On :

ನವದೆಹಲಿ: ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆಯ ಬಿಕ್ಕಟ್ಟಿಗೆ ಅಂತ್ಯ ಹಾಡಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಆಂಧ್ರ ಪುನರ್ ರಚನಾ ಕರಡು ಮಸೂದೆಗೆ ಸೋಮವಾರ ಅಂಕಿತ ಹಾಕಿದ್ದಾರೆ.  

ಆಂಧ್ರ ಪುನರ್ ರಚನಾ ಮಸೂದೆಯನ್ನು ಕೇಂದ್ರ ಸರ್ಕಾರ ರಾಷ್ಟ್ರಪತಿಗಳ ಅನುಮೋದನೆಗಾಗಿ ಕಳಿಸಿತ್ತು. ಈ ಮಸೂದೆಗೆ ಇಂದು ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಸಂಸತ್‌ನಲ್ಲಿ ಮಸೂದೆ ಮಂಡನೆಯ ಹಾದಿ ಸುಗಮವಾಗಿದೆ. ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿರುವ ಹಿನ್ನೆಲೆಯಲ್ಲಿ ಯುಪಿಎ ಮಂಗಳವಾರ ರಾಜ್ಯಸಭೆಯಲ್ಲಿ ಮಸೂದೆ ಮಂಡನೆ ಮಾಡುವ ಸಾಧ್ಯತೆ ಇದೆ.

ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆಗೆ ವಿವಾದಕ್ಕೆ ಸಂಬಂಧಿಸಿದಂತೆ ಶುಕ್ರವಾರ ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಈ ಮಸೂದೆಗೆ ಒಪ್ಪಿಗೆ ನೀಡಲಾಗಿತ್ತು. ಆನಂತರ ರಾಷ್ಟ್ರಪತಿ ಅವರ ಅನುಮತಿಕ್ಕಾಗಿ ಮಸೂದೆಯನ್ನು ಕಳಿಸಿಕೊಡಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.