ಜನಲೋಕಪಾಲ: ಕೇಂದ್ರ ಕಾನೂನು ಸಚಿವಾಲಯಕ್ಕೆ ಜಂಗ್ ಮೊರೆ

ನವದೆಹಲಿ: ದೆಹಲಿ ಸರ್ಕಾರ ಮಂಡಿಸಲಿರುವ ಜನಲೋಕಪಾಲ ಮಸೂದೆಗೆ ಸಾಂವಿಧಾನಿಕ ಸ್ಥಾನಮಾನ ನೀಡುವ ಉದ್ದೇಶದೊಂದಿಗೆ, ವಿಧಾನ ಸಭೆಯಲ್ಲಿ ಮಂಡಿಸುವ ಮೊದಲು ಕೇಂದ್ರ ಸರ್ಕಾರದ ಅನುಮತಿ ಪಡೆಯಬೇಕೆ ಎಂಬುದನ್ನು ಸ್ಪಷ್ಟೀಕರಿಸುವಂತೆ ಕೋರಿ, ಕೇಂದ್ರ ಕಾನೂನು ಸಚಿವಾಲಯಕ್ಕೆ ದೆಹಲಿ ಉಪ ರಾಜ್ಯಪಾಲ ನಜೀಬ್ ಜಂಗ್ ಸೋಮವಾರ ಮನವಿ ಮಾಡಿದ್ದಾರೆ.
ವಿಧಾನಸಭೆಯಲ್ಲಿ ಮಂಡನೆಯಾಗಲಿರುವ ಜನಲೋಕಪಾಲಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ಪ್ರಕ್ರಿಯೆ ಯಾವುದೇ ವಿವಾದಕ್ಕೀಡಾಗದಂತೆ ಮುನ್ನೆಚ್ಚರಿಗೆ ಕ್ರಮ ಕೈಗೊಂಡಿರುವ ಉಪ ರಾಜ್ಯಪಾಲರು, ಸಂಪೂರ್ಣ ಸ್ಪಷ್ಟನೆಗಾಗಿ ಕಾನೂನು ಸಚಿವಾಲಯದ ಅಂತಿಮ ಅಭಿಮತ ಕೇಳಿದ್ದಾರೆಂದು ದೆಹಲಿ ಉನ್ನತ ಮೂಲಗಳು ತಿಳಿಸಿವೆ.
ಮತ್ತೊಂದೆಡೆ, ಈ ಪ್ರಕ್ರಿಯೆಗೆ ಕೇಂದ್ರದ ಪೂರ್ವಾನುಮತಿ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಪಾದಿಸುತ್ತಿದ್ದಾರೆ. ಆದರೆ ವ್ಯವಹಾರ ನಿರ್ವಹಣೆ ನಿಯಮಗಳ(ಟಿಬಿಆರ್-2002) ಅಡಿಯಲ್ಲಿ ಕೇಂದ್ರದ ಪೂರ್ವಾನುಮತಿ ಅಗತ್ಯ ಎಂಬುದು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಅಭಿಮತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


