ಮಾಜಿ ಸಚಿವ ರಾಮದಾಸ್ ಆತ್ಮಹತ್ಯೆ ಯತ್ನ

ಮೈಸೂರು: ಮಾಜಿ ಸಚಿವ ಎಸ್.ಕೆ.ರಾಮದಾಸ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದು, ತೀವ್ರವಾಗಿ ಅಸ್ವಸ್ಥಗೊಂಡಿರುವ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೈಸೂರಿನ ಮಹಾನಗರ ಪಾಲಿಕೆ ಅತಿಥಿ ಗೃಹದಲ್ಲಿ ನೇಣುಬಿಗಿದುಕೊಂಡು ರಾಮದಾಸ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಮೈಸೂರಿನ ಅಪೊಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರವಾಗಿ ಅಸ್ವಸ್ಥಗೊಂಡಿರುವ ಅವರನ್ನು ತೀವ್ರನಿಗಾ ಘಟಕದಕಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಬಿಜೆಪಿ ಮುಖಂಡ ಮತ್ತು ಮಾಜಿ ಸಚಿವ ರಾಮದಾಸ್ ಅವರು ತನ್ನನ್ನು ಪ್ರೀತಿಸಿ ಮದುವೆಯಾಗುವುದಾಗಿ ಹೇಳಿ ಈಗ ತನಗೆ ವಂಚಿಸಿದ್ದಾರೆ ಎಂದು ಪ್ರೇಮಕುಮಾರಿ ಎಂಬ ಮಹಿಳೆ ಮಾಧ್ಯಮಗಳಲ್ಲಿ ಆರೋಪಿಸಿದ್ದರು. ಅಲ್ಲದೆ ಈ ವಿಚಾರವನ್ನು ಬಹಿರಂಗ ಪಡಿಸಿದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ರಾಮದಾಸ್ ಅವರು ಹೇಳಿದ್ದರು ಎಂದು ಆ ಮಹಿಳೆ ಹೇಳಿದ್ದಾರೆ.
'ಮಾಜಿ ಸಚಿವ ರಾಮದಾಸ್ ಮತ್ತು ತಾನು ಕಳೆದ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದು, ದೈಹಿಕ ಸಂಪರ್ಕ ಕೂಡ ಏರ್ಪಟ್ಟಿತ್ತು. ನಾನು ಹಲವು ಬಾರಿ ತನ್ನನ್ನು ಮದುವೆಯಾಗುವಂತೆ ಕೇಳಿದ್ದೆ, ಆದರೆ ಅವರು ಈ ಬಗ್ಗೆ ನಿಖರವಾದ ನಿರ್ಣಯ ತೆಗೆದುಕೊಳ್ಳಲಿಲ್ಲ. ಹೀಗಾಗಿ ನಾನು ನಮ್ಮಿಬ್ಬರ ವಿಚಾರವನ್ನು ಬಹಿರಂಗ ಮಾಡುವುದಾಗಿ ಹೇಳಿದ್ದೆ. ಆದರೆ ಅವರು ಈ ವಿಚಾರವನ್ನು ಬಹಿರಂಗಗೊಳಿಸಿದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದರು' ಎಂದು ಪ್ರೇಮಕುಮಾರಿ ಎಂಬ ಮಹಿಳೆ ಆರೋಪಿಸಿದ್ದಾರೆ
ಈ ಬಗ್ಗೆ ತಮ್ಮ ಮತ್ತು ರಾಮದಾಸ್ ಅವರ ನಡುವಿನ ದೂರವಾಣಿ ಸಂಭಾಷಣೆಯನ್ನು ಪ್ರೇಮಕುಮಾರಿ ಅವರು ಮಾಧ್ಯಮಗಳಿಗೆ ನೀಡಿದ್ದಾರೆ. ಇದಾದ ಬಳಿಕೆ ಯಾರ ಸಂಪರ್ಕಕ್ಕೂ ಸಿಗದ ರಾಮದಾಸ್ ಅವರು ಮೈಸೂರಿನ ಮಹಾನಗರ ಪಾಲಿಕೆಯ ಅತಿಥಿ ಗೃಹದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಮಹಾನಗರ ಪಾಲಿಕೆಯ ಅತಿಥಿ ಗೃಹದಲ್ಲಿ ಆತ್ಮಹತ್ಯೆ ಪತ್ರ ಕೂಡ ದೊರೆತಿದೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


