ಆರ್ಯ ವೈಶ್ಯ ಸಮಾಜದಿಂದ ಸಮಾಜ ಸುಧಾರಿತ ಕೆಲಸ

ಬೆಂಗಳೂರು: ವಾಸವಿ ದೇವಸ್ಥಾನ ಹಾಗೂ ಆರ್ಯ ವೈಶ್ಯ ಸಮಾಜದ ಉಚಿತ ವಿದ್ಯಾರ್ಥಿ ನಿಲಯದ ಶಂಕು ಸ್ಥಾಪನೆ ಮತ್ತು ಶಿಲಾನ್ಯಾಸವನ್ನು ಪರಮಪೂಜ್ಯ ಶ್ರೀ. ವಿಶ್ವ ತೀರ್ಥ ಸ್ವಾಮೀಜಿ(ಪೇಜಾವರ ಶ್ರೀ)ಯವರು ನೇರವೇರಿಸಿದರು.
ಶಿಲಾನ್ಯಾಸ ನೇರವೇರಿಸಿ ಮಾತನಾಡಿದ ಪೇಜಾವರ ಶ್ರೀಗಳು, ಆರ್ಯ ವೈಶ್ಯ ಸಮಾಜವು ಸಮಾಜದ ಏಳಿಗೆಗಾಗಿ ಉತ್ತಮ ಕೆಲಸವನ್ನು ಮಾಡುತ್ತಾ ಬಂದಿದೆ. ಜೊತೆಯಲ್ಲೆ ದಾನ, ಧರ್ಮ ಹವನ ಮತ್ತು ಶೈಕ್ಷಣಿಕ ವಿಭಾಗಗಳಲ್ಲಿ ಇತರೆ ಸಮಾಜದವರಿಗೂ ಮಾದರಿಯಾಗಿದ್ದಾರೆ. ಇಂತಹ ಸಮಾಜಮುಖಿ ಕೆಲಸಗಳನ್ನು ನಿರಂತರವಾಗಿ ಮಾಡಲಿ ಎಂದು ಹಾರೈಸಿದರು.
ಹೊರ ಊರುಗಳಿಂದ ಉನ್ನತ ವಿದ್ಯಾಭ್ಯಾಸಕ್ಕಾಗಿ ನಗರಕ್ಕೆ ಬರುವ ಬಡ ವಿದ್ಯಾರ್ಥಿಗಳ ಅನೂಕುಲಕ್ಕಾಗಿ ವಾಸವಿ ಸೇವಾ ಸಂಘ ಮತ್ತು ವಾಸವಿ ದೇವಸ್ಥಾನ ಟ್ರಸ್ಟ್ ನೂತನ ವಿದ್ಯಾರ್ಥಿ ನಿಲಯದ ಶಂಕು ಸ್ಥಾಪನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಕಾರ್ಯಕ್ರಮದಲ್ಲಿ ಕರ್ನಾಟಕ ಆರ್ಯ ವೈಶ್ಯ ಮಹಾಸಭಾ ರಾಜಕೀಯ ಸಮಿತಿ ಅಧ್ಯಕ್ಷರಾದ ಸಾಯಿಗೋಲ್ಡ್ ಪ್ಯಾಲೇಸ್ ಮಾಲೀಕ ಡಾ. ಟಿ.ಎ ಶರವಣ, ಕರ್ನಾಟಕ ಆರ್ಯ ವೈಶ್ಯ ಮಹಾಸಭಾ ಅಧ್ಯಕ್ಷರಾದ ಆರ್.ಪಿ. ರವಿಶಂಕರ್ ಹಾಗೂ ವಾಸವಿ ಸೇವಾ ಸಂಘದ ಅಧ್ಯಕ್ಷರಾದ ಕೆ.ವಿ. ವೆಂಕಟೇಶ್ ಬಾಬು ಹಾಗೂ ಪದಾಥಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


