ಈಗಿನ ಸುದ್ದಿ

ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಗೊಂಡ ಸಂಸದ ರಾವ್ ಇಂದ್ರಜಿತ್ ಸಿಂಗ್

ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಗೊಂಡ ಸಂಸದ ರಾವ್ ಇಂದ್ರಜಿತ್ ಸಿಂಗ್
Published On :

ನವದೆಹಲಿ: ಕಾಂಗ್ರೆಸ್ ಸಂಸದ ರಾವ್ ಇಂದ್ರಜಿತ್ ಸಿಂಗ್ ಅವರು ಗುರುವಾರ ಭಾರತೀಯ ಜನತಾ ಪಾರ್ಟಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವದ್ರಾ ಅವರ ಭೂ ವ್ಯವಹಾರದ ಬಗ್ಗೆ ತನಿಖೆ ನಡೆಸಿ ಎಂದು ರಾವ್ ಇಂದ್ರಜಿತ್ ಒತ್ತಾಯಿಸಿದ್ದರು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಇಂದ್ರಜಿತ್ ಗುರಿಯಾಗಿದ್ದರು.

ಇದರ ಬೆನ್ನಲ್ಲೇ ಇಂದು ಇಂದ್ರಜಿತ್ ಸಿಂಗ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಸಿಂಗ್ ಸೇರ್ಪಡೆಗೆ ಸಂತಸ ವ್ಯಕ್ತಪಡಿಸಿರುವ ಬಿಜೆಪಿ ಅಧ್ಯಕ್ಷ ರಾಜನಾಥ್‌ಸಿಂಗ್, ಇಂದ್ರಜಿತ್ ಅನ್ಯಾಯದ ವಿರುದ್ಧ ಧ್ವನಿ ಎತ್ತಿದವರು. ಇಂತವಹರು ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕಾಗಿ 36 ವರ್ಷಗಳ ಕಾಲ ಇಂದ್ರಜಿತ್ ದುಡಿದಿದ್ದರು. 1998, 2004 ಮತ್ತು 2009ರಲ್ಲಿ ಲೋಕಸಭಾ ಸಂಸದರಾಗಿ ಆಯ್ಕೆಗೊಂಡಿದ್ದರು. 1977ರಲ್ಲಿ ಶಾಸಕರಾಗುವುದರ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ್ದರು.

ಇತ್ತೀಚೆಗಷ್ಟೆ ಇಂದ್ರಜಿತ್ ಅವರು ಹರಿಯಾಣ ಇನ್ಸಾಫ್ ಕಾಂಗ್ರೆಸ್ ಎಂಬ ಪಕ್ಷವನ್ನು ಸ್ಥಾಪಿಸಿದ್ದರು. ಇಂದು ಅಧಿಕೃತವಾಗಿ ಹರಿಯಾಣ ಇನ್ಸಾಫ್ ಕಾಂಗ್ರೆಸ್ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.