'ರಾಮ' ದರ್ಶನಕ್ಕೆ ಬಂದ ಪ್ರೇಮಾಗೆ ನಾನಾ ವಿಘ್ನ
ಮೈಸೂರು: ಮಾಜಿ ಸಂಸದ ರಾಮದಾಸ್ ಅವರನ್ನು ಭೇಟಿ ಮಾಡಲು ಮೈಸೂರಿನ ಅಪೊಲೋ ಆಸ್ಪತ್ರೆಗೆ ಬಂದಿದ್ದ ಪ್ರೇಮಾಕುಮಾರಿ ಅವರಿಗೆ ಬಿಜೆಪಿ ಮಹಿಳಾ ಕಾರ್ಯಕರ್ತರು ಮತ್ತಿಗೆ ಹಾಕಿದ ಘಟನೆ ಶುಕ್ರವಾರ ನಡೆದಿದೆ.
ಪ್ರೇಮಿಗಳ ದಿನವಾದ ಇಂದು ರಾಮದಾಸ್ ಅವರನ್ನು ಭೇಟಿ ಮಾಡುವುದಾಗಿ ಹೇಳಿದ್ದ ಪ್ರೇಮಾ ಕುಮಾರಿ ಅವರು ತಮ್ಮ ಸಹೋದರನೊಡನೆ ಮಧ್ಯಾಹ್ನ ಮೈಸೂರಿನ ಬಿಜಿಎಸ್ ಅಪೋಲೊ ಅಸ್ಪತ್ರೆಗೆ ಆಗಮಿಸಿದ್ದರು. ಈ ವಿಚಾರವನ್ನು ಮೊದಲೇ ತಿಳಿದಿದ್ದ ಬಿಜೆಪಿ ಮಹಿಳಾ ಕಾರ್ಯಕರ್ತರು ಆಸ್ಪತ್ರೆ ಆವರಣಕ್ಕೆ ಪ್ರೇಮಾ ಅವರ ಕಾರು ಆಗಮಿಸುತ್ತಿದ್ದಂತೆಯೇ ಅದನ್ನು ಅಡ್ಡಗಟ್ಟಿ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ಹಂತದಲ್ಲಿ ಪೊಲೀಸರು ಮಧ್ಯ ಪ್ರವೇಶ ಮಾಡಿ ಕಾರ್ಯಕರ್ತರನ್ನು ಸಮಾಧಾನ ಪಡಿಸಿದರು. ಅಲ್ಲದೆ ಪ್ರೇಮಾ ಅವರನ್ನು ಸುರಕ್ಷಿತವಾಗಿ ಕಾರಿನಲ್ಲಿಯೇ ಕೂರಿಸಿದರು.
ಆದರೆ ಈ ವೇಳೆ ಪ್ರೇಮಾ ಕುಮಾರಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ರಾಮದಾಸ್ ಅವರ ಭೇಟಿಗೆ ಅನುವು ಮಾಡಿಕೊಡುವುದಿಲ್ಲ ಎಂದು ರಸ್ತೆಯಲ್ಲಿಯೇ ಪ್ರತಿಭಟನೆ ನಡೆಸಿದರು. ಕೊನೆಗೆ ಬೇರೆ ದಾರಿ ಇಲ್ಲದೆ ಪ್ರೇಮಾಕುಮಾರಿ ಅವರು ರಾಮದಾಸ್ ಅವರನ್ನು ಭೇಟಿ ಮಾಡದೇ ವಾಪಾಸ್ ಆದರು.
ರಾಮದಾಸ್ ಆರೋಗ್ಯದಲ್ಲಿ ಚೇತರಿಕೆ, ಸಂಜೆ ಮನೆಗೆ ಮರಳುವ ಸಾಧ್ಯತೆ
ಅನೈತಿಕ ಸಂಬಂಧ ಆರೋಪದ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥಗೊಂಡಿದ್ದ ಮಾಜಿ ಸಚಿವ ರಾಮದಾಸ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಶುಕ್ರವಾರ ಸಂಜೆ ಮನೆಗೆ ಮರಳು ಸಾಧ್ಯತೆ ಇದೆ ಎಂದು ಬಿಜಿಎಸ್ ಅಪೋಲೊ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಮೈಸೂರಿನ ಅಪೋಲೊ ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವೈದ್ಯರು, 'ರಾಮದಾಸ್ ಅವರ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡುಬಂದಿದೆ. ಸಾಧ್ಯವಾದರೆ ಇಂದು ಸಂಜೆಯೇ ಅವರನ್ನು ಮನೆಗೆ ಮರಳಿಸುತ್ತೇವೆ' ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

