ಈಗಿನ ಸುದ್ದಿ

ರಾಮದಾಸ್ ಆರೋಗ್ಯ ಸ್ಥಿರ, ಇಂದು ಸಂಜೆ ಡಿಸ್‌ಚಾರ್ಜ್

ರಾಮದಾಸ್ ಆರೋಗ್ಯ ಸ್ಥಿರ, ಇಂದು ಸಂಜೆ ಡಿಸ್‌ಚಾರ್ಜ್
Published On :

ಮೈಸೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದ ಮಾಜಿ ಸಚಿವ ಎಸ್.ಎ.ರಾಮದಾಸ್ ಅವರ ಆರೋಗ್ಯ ಸ್ಥಿರವಾಗಿದ್ದು, ಇಂದು ಸಂಜೆ ಅವರನ್ನು ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಮಾಡುವ ಸಾಧ್ಯತೆ ಇದೆ.

ರಾಮದಾಸ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರನ್ನು ಇಂದು ಮಧ್ಯಾಹ್ನ ಐಸಿಯುನಿಂದ ವಾರ್ಡ್‌ಗೆ ಸ್ಥಳಾಂತರಿಸಲಾಗುವುದು ಎಂದು ಮೈಸೂರಿನ ಅಪೋಲೊ ಬಿಜಿಎಸ್ ಆಸ್ಪತ್ರೆಯ ಮುಖ್ಯಸ್ಥ ಡಾ.ಸೋಮನಾಥ್ ಅವರು ತಿಳಿಸಿದ್ದಾರೆ. ಅಲ್ಲದೆ ರಾಮದಾಸ್ ಅವರ ಕುಟುಂಬದವರ ಮನವಿ ಮೇರೆಗೆ ಇಂದು ಸಂಜೆ ವೇಳೆಗೆ ಅವರನ್ನು ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಮಾಡಲಾಗುವುದು ಎಂದು ಹೇಳಿದ್ದಾರೆ.

ಕಳೆದ ಮಂಗಳವಾರ ಮಹಿಳೆಯೊಬ್ಬರು ತಮ್ಮ ವಿರುದ್ಧ ಮಾಡಿದ ಆರೋಪದಿಂದ ಮನನೊಂದು ರಾಮದಾಸ್ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಪ್ರೇಮಕುಮಾರಿ ಎಂಬುವರು ರಾಮದಾಸ್ ತಮಗೆ 5 ವರ್ಷಗಳಿಂದ ಪರಿಚಿತರಾಗಿದ್ದು, ಮದುವೆಯಾಗುವುದಾಗಿ ನಂಬಿಸಿ ತಮ್ಮನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದೇ ಈ ಘಟನೆಗೆ ಕಾರಣವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.