ಈಗಿನ ಸುದ್ದಿ

ಮಹಿಳಾ ಮೀಸಲಾತಿ ಮಸೂದೆ ಮಂಡನೆ ವಿಫಲಕ್ಕೆ ಕ್ಷಮೆಯಾಚಿಸಿದ ಸೋನಿಯಾ

ಮಹಿಳಾ ಮೀಸಲಾತಿ ಮಸೂದೆ ಮಂಡನೆ ವಿಫಲಕ್ಕೆ  ಕ್ಷಮೆಯಾಚಿಸಿದ ಸೋನಿಯಾ
Published On :

ಕೊಚ್ಚಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ ಮಾಡವಲ್ಲಿ ಕಾಂಗ್ರೆಸ್ ವಿಫಲವಾಗಿರುವುದಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ಕ್ಷಮೆಯಾಚಿಸಿದ್ದಾರೆ.

ಇಂದು ಕೇರಳದ ಕೊಚ್ಚಿಯಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸಿದ ಸೋನಿಯಾ, ಹಲವು ಗೊಂದಲಗಳಿಂದ ಮಹಿಳಾ ಮೀಸಲಾತಿ ಮಸೂದೆ ಮಂಡನೆ ಮಾಡಲು ಸಾಧ್ಯವಾಗಲಿಲ್ಲ. ಇದಕ್ಕೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಒಪ್ಪಿಗೆ ದೊರೆಯಿತಾದರೂ, ಲೋಕಸಭಾದಲ್ಲಿ ಒಪ್ಪಿಗೆ ದೊರೆಯಲಿಲ್ಲ. ನಮ್ಮ ಪ್ರಯತ್ನ ವಿಫಲವಾದ ಹಿನ್ನಲೆಯಲ್ಲಿ ನಾನು ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಗಾಗಿ ಭಾರರತವನ್ನೇ ಒಗ್ಗೂಡಿಸುತ್ತೇವೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ದೇಶದಲ್ಲಿ ಒಗ್ಗಟ್ಟು ಕಡಿಮೆಯಾಗುತ್ತಿದೆ. ಜನರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಭಯಪಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಲೋಕಸಭಾ ಚುನಾವಣೆಗಾಗಿ ಅಗ್ನಿಪರೀಕ್ಷೆ ಎದುರಿಸಬೇಕಾಗಿದೆ ಎಂದು ಸೋನಿಯಾ ತಿಳಿಸಿದ್ದಾರೆ.

ಕಾಂಗ್ರೆಸ್‌ಗೆ ಬೇಕಾಗಿರುವುದು ಏಕತೆ ಆದರೆ ಇತರೆ ಪಕ್ಷಗಳಿಗೆ ಬೇಕಾಗಿರುವುದು ಏಕರೂಪತೆ. ನಾವು ದೇಶವನ್ನು ಒಗ್ಗೂಡಿಸಲು ನೋಡಿದರೆ, ಇತರರು ದೇಶವನ್ನು ವಿಭಜಿಸಲು ನೋಡುತ್ತಾರೆ ಎಂದು ಆರೋಪಿಸಿದ್ದಾರೆ.

2014ರ ಚುನಾವಣೆ ಸಾಧನೆಯಲ್ಲ. 2014ರ ಲೋಕಸಭಾ ಚುನಾವಣೆ ಬಹಳ ಪ್ರಮುಖ ಚುನಾವಣೆ ಏಕೆಂದರೆ ಯಾವ ರೀತಿ ಭಾರತ ಬೇಕು ಎಂದು ನಿರ್ಧರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.