ಅಂಡರ್ 19 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ ಜಯ

ದುಬೈ: ಅಂಡರ್ 19 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ ಶನಿವಾರ ಭರ್ಜರಿ ಜಯ ಗಳಿಸಿದೆ.
ಇಂದು ಪಾಕಿಸ್ತಾನ ವಿರುದ್ಧ ನಡೆದ ಪ್ರಥಮ ಪಂದ್ಯದಲ್ಲಿ ಭಾರತ 40 ರನ್ಗಳ ಭರ್ಜರಿ ಜಯ ದಾಖಲಿಸಿದ್ದು, ವಿಶ್ವಕಪ್ ಟೂರ್ನಿಯಲ್ಲಿ ಭಾರತ ಜಯದ ಮೂಲಕ ಪಾದಾರ್ಪಣೆ ಮಾಡಿದೆ.
ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಆಟಗಾರರು ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 262 ಪೇರಿಸಿದರು. ಭಾರತ ನೀಡಿದ 263 ರನ್ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಪಾಕಿಸ್ತಾನ 48.4 ಓವರ್ಗಳಲ್ಲಿ 222 ತನ್ನೆಲ್ಲ ವಿಕೆಟ್ ಕಳೆದುಕೊಂಡು ಸರ್ವಪತನ ಕಂಡಿತು.
ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಭಾರತ ಪರ ಆಟಗಾರ ಸರ್ಫರಾಝ್ ಖಾನ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


