ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 246 ರನ್ ಮುನ್ನಡೆ

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಭಾರತ 246 ರನ್ಗಳ ಮುನ್ನಡೆ ಸಾಧಿಸಿದೆ.
ಶತಕ ವಂಚಿತ ಆರಂಭಿಕ ಆಟಗಾರ ಶಿಖರ್ ಧವನ್(98) ಅಬ್ಬರದ ಬ್ಯಾಟಿಂಗ್ ಹಾಗೂ ಅಜಿಂಕ್ಯ ರಹಾನೆ ಶತಕದ ನೆರವಿನೊಂದಿಗೆ ಮೊದಲ ಇನ್ನಿಂಗ್ಸ್ನಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 438 ರನ್ಗೆ ಆಲೌಟ್ ಆಗಿದ್ದು. 246 ರನ್ ಮುನ್ನಡೆ ಸಾಧಿಸಿದೆ.
ಮೊದಲ ಟೆಸ್ಟ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತಿದ್ದ ಭಾರತ ಎರಡನೇ ಟೆಸ್ಟ್ ಗೆಲ್ಲುವ ಸಾಧ್ಯತೆಗಳು ಗೋಚರಿಸುತ್ತಿವೆ. ಭಾರತದ ಮೊದಲ ಇನ್ನಿಂಗ್ಸ್ ಪತನದ ನಂತರ ಬ್ಯಾಟ್ ಬೀಸಿದ ನ್ಯೂಜಿಲೆಂಡ್ ಎರಡನೇ ಇನ್ನಿಂಗ್ಸ್ನಲ್ಲಿ 1 ವಿಕೆಟ್ ಕಳೆದುಕೊಂಡು 24 ರನ್ ಗಳಿಸಿದೆ.
ಮೊದಲ ದಿನ ಎರಡು ವಿಕೆಟ್ ಕಳೆದುಕೊಂಡು 100 ರನ್ ಗಳಿಸಿದ್ದ ಭಾರತದ ಆಟಗಾರರು, ಎರಡನೇ ದಿನವು ತಮ್ಮ ಆಕ್ರಮಣಕಾರಿ ಆಟ ಮುಂದುವರಿಸಿದ್ದರು. ಇಂದು ಭಾರತ ತನ್ನೆಲ್ಲ ವಿಕೆಟ್ ಕಳೆದುಕೊಂಡು 438 ರನ್ಗಳಿಗೆ ಆಲೌಟ್ ಆಯಿತು.
ಎರಡನೇ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತ ತಂಡದ ಆಟಗಾರರು ನ್ಯೂಜಿಲೆಂಡ್ ತಂಡದ ಬೌಲರ್ಗಳಿಗೆ ನೀರಿಳಿಸಿದ್ದಾರೆ. ಅಬ್ಬರದ ಬ್ಯಾಟಿಂಗ್ ನಡೆಸಿದ ಶಿಖರ್ ಧವನ್(98) ಗಳಿಸಿ ಶತಕ ವಂಚಿತರಾದರು. ನಂತರ ಬಂದ ಅಜಿಂಕ್ಯಾ ರಹಾನೆ(118) ರನ್ ಗಳಿಸಿದರು. ಆ ನಂತರ ಧೋನಿ 68 ರನ್ ಗಳಿಸಿ ನಿರ್ಗಮಿಸಿದರು.
ನ್ಯೂಜಿಲೆಂಡ್ ಪರ ವೇಗಿಗಳಾದ ಸೌಥಿ, ವ್ಯಾಗ್ನರ್, ಬೋಲ್ಟ್ ತಲಾ ಮೂರು ವಿಕೆಟ್ ಪಡೆದರೆ. ನೀಶಮ್ 1 ವಿಕೆಟ್ ಗಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


