ಸಂಸದ ಜಗನ್ ಮೋಹನ್ ರೆಡ್ಡಿ ಬಂಧನ

ನವದೆಹಲಿ: ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ವಿರೋಧಿಸಿ ಸಂಸತ್ ಭವನ ಮುತ್ತಿಗೆ ಹಾಕಲು ಹೊರಟ್ಟಿದ್ದ, ವೈಎಸ್ಆರ್ ಕಾಂಗ್ರೆಸ್ ಮುಖ್ಯಸ್ಥ ಹಾಗೂ ಸಂಸದ ಜಗನ್ ಮೋಹನ್ ರೆಡ್ಡಿರನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿ, ತಮ್ಮ ವಶಕ್ಕೆ ಪಡೆದಿದ್ದಾರೆ.
ಅಖಂಡ ಆಂಧ್ರಪ್ರದೇಶಕ್ಕೆ ಆಗ್ರಹಿಸಿ ಜಗನ್ ದೆಹಲಿಯ ಜಂತರ್ ಮಂತರ್ನಲ್ಲಿ ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದು, ಸಂಜೆ ಸಂಸತ್ ಭವನಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ವೇಳೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತ ಕ್ರಮವಾಗಿ ಜಗನ್ ಮತ್ತು ತಾಯಿ ವಿಜಯಮ್ಮ ಅವರನ್ನು ಪೊಲೀಸರು ಬಂಧಿಸಿದ್ದು, ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.
ಈ ವೇಳೆ ಮಾತನಾಡಿದ ಜಗನ್, ಯಾವುದೇ ಕಾರಣಕ್ಕು ಆಂಧ್ರಪ್ರದೇಶ ವಿಭಜನೆಗೆ ನನ್ನ ಬೆಂಬಲವಿಲ್ಲ ಎಂದು ಹೇಳಿದ್ದಾರೆ.
ಜಂತರ್ ಮಂತರ್ನಲ್ಲಿ ವೈಎಸ್ಆರ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಪ್ರತಿಭಟನೆಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


