ಈಗಿನ ಸುದ್ದಿ

ಸೋಲಿನ ದವಡೆಯಿಂದ ನ್ಯೂಜಿಲೆಂಡ್ ಪಾರು

ಸೋಲಿನ ದವಡೆಯಿಂದ ನ್ಯೂಜಿಲೆಂಡ್ ಪಾರು
Published On :

ವೆಲ್ಲಿಂಗ್ಟನ್: ಭಾರತದ ವಿರುದ್ಧದ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಬ್ರೆಂಡನ್ ಮೆಕಲಮ್‌ರ ಅಜೇಯ 281 ರನ್ ನೆರವಿನಿಂದ ನ್ಯೂಜಿಲೆಂಡ್ ಸೋಲಿನ ದವಡೆಯಿಂದ ಪಾರಾಗಿದೆ.

ನಾಲ್ಕನೇ ದಿನದಾಟದ ಅಂತ್ಯಕ್ಕೆ ನ್ಯೂಜಿಲೆಂಡ್ 571 ರನ್‌ಗೆ 6 ವಿಕೆಟ್‌ಗಳನ್ನು ಕಳೆದುಕೊಂಡು 325 ರನ್‌ಗಳ ಮುನ್ನಡೆ ಸಾಧಿಸಿದ್ದು, ಐದನೇ ದಿನಕ್ಕೆ ಬ್ಯಾಟಿಂಗ್ ಕಾಯ್ದಿರಿಸಿದೆ.

ಮೂರನೇ ದಿನದಾಟಕ್ಕೆ ಎರಡನೇ ಇನ್ನಿಂಗ್ಸ್‌ನಲ್ಲಿ 1 ವಿಕೆಟ್ ಕಳೆದುಕೊಂಡು 24 ರನ್‌ಗಳಿಸಿದ್ದ ನ್ಯೂಜಿಲೆಂಡ್ ನಾಲ್ಕನೇ ದಿನದಾಟಕ್ಕೆ ಮೆಕಲಮ್ ಅವರು ಉತ್ತಮ ಬ್ಯಾಂಟಿಗ್‌ನಿಂದಾಗಿ ಸೋಲಿನ ಭೀತಿಯಿಂದ ಪಾರಾಗಿದೆ.

ಆರನೇ ವಿಕೆಟ್ ಜತೆಯಾಟದಲ್ಲಿ ಮೆಕಲಮ್, ವ್ಯಾಟ್ಲಿಂಗ್(124) ಅವರ ಜತೆ ಸೇರಿ 352 ರನ್‌ಗಳ ದಾಖಲೆಯ ಆಟವಾಡಿದ್ದಾರೆ.

ಮೊದಲ ಇನ್ನಿಂಗ್ಸ್‌ನಲ್ಲಿ ನ್ಯೂಜಿಲೆಂಡ್ 192 ರನ್‌ಗಳ ಅಲ್ಪ ಮೊತ್ತಕ್ಕೆ ಪತನಗೊಂಡಿತ್ತು. ನಂತರ ಬ್ಯಾಟ್ ಮಾಡಿದ ಭಾರತ 438 ರನ್‌ಗಳನ್ನು ಪೇರಿಸಿ, 246 ರನ್ ಮುನ್ನಡೆ ಸಾಧಿಸಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ನ್ಯೂಜಿಲೆಂಡ್ 6 ವಿಕೆಟ್ ನಷ್ಟಕ್ಕೆ 571 ರನ್ ದಾಖಲಿಸಿದ್ದು, ಸುಸ್ಥಿತಿಯಲ್ಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.