ಈಗಿನ ಸುದ್ದಿ

ತೆಲಂಗಾಣ ವಿವಾದ: ಸೋನಿಯಾ ವಿರುದ್ಧ ಜಗನ್ ವಾಗ್ದಾಳಿ

Published On :

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಮುಂದಿನ ಪ್ರಧಾನಿ ಮಾಡುವ ಏಕೈಕ ಗುರಿಯೊಂದಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆಂಧ್ರಪ್ರದೇಶವನ್ನು ವಿಭಾಗಿಸುತ್ತಿದ್ದಾರೆ ಎಂದು ಜಗನ್ ಆರೋಪಿಸಿದ್ದಾರೆ.

ಆಂಧ್ರಪ್ರದೇಶ ವಿಭಜನೆಯನ್ನು ಖಂಡಿಸಿ, ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ವೈಎಸ್‌ಆರ್ ಕಾಂಗ್ರೆಸ್ ಮುಖಂಡ ಹಾಗೂ ಕಡಪ ಸಂಸದ ಜಗನ್ ಮೋಹನ್ ರೆಡ್ಡಿ ಅವರು ಧರಣಿ ನಡೆಸುತ್ತಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆಲಂಗಾಣವನ್ನು ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್)ಯೊಂದಿಗೆ ಸೇರಿಸುವ ಮೂಲಕ ತೆಲಂಗಾಣ ಲೋಕಸಭಾ ಕ್ಷೇತ್ರಗಳ ಗೆಲುವಿನ ಮೇಲೆ ಸೋನಿಯಾ ಗಾಂಧಿ ಕಣ್ಣಿಟ್ಟಿದ್ದು,  ಈ ಮೂಲಕ ತಮ್ಮ ಮಗಗನ್ನು ರಾಹುಲ್ ರನ್ನು ಪ್ರಧಾನಿ ಮಾಡುವ ಉದ್ದೇಶ ಹೊಂದಿದ್ದಾರೆ ಎಂದು ಸೋನಿಯಾ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಏತನ್ಮಧ್ಯೆ, ಯಾವುದೇ ಕಾರಣಕ್ಕೂ ಆಂಧ್ರಪ್ರದೇಶವನ್ನು ವಿಭಜಿಸಿ ತೆಲಂಗಾಣ ರಾಜ್ಯ ರಚನೆ ಮಾಡಬಾರದು, ಜನತೆಯ ಒತ್ತಾಸೆಯಂತೆ ಅಖಂಡ ಆಂಧ್ರ ಉಳಿಸುವಂತೆ ಜಗನ್ ಒತ್ತಾಯಿಸಿದ್ದಾರೆ. ಸಂಸತ್ತಿನಲ್ಲಿ ಮಂಡನೆಯಾಗಿರುವ ತೆಲಂಗಾಣ ಮಸೂದೆಯನ್ನು ಸರ್ಕಾರ ಹಿಂಪಡೆಯಬೇಕು, ಆಂಧ್ರ ವಿಭಜನೆಯಿಂದ ಮುಂದೆ ದಕ್ಷಿಣ ಭಾರತದಲ್ಲಿ ಪ್ರತ್ಯೇಕತೆಯ ಕೂಗು ಕೇಳಿ ಬರುತ್ತದೆ ಎಂದಿದ್ದಾರೆ.

ವೈಎಸ್‌ಆರ್ ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಪ್ರತಿಭಟನೆಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದಾರೆ.  ಜಗನ್‌ಮೋಹನ್ ರೆಡ್ಡಿ ಅವರ ಪ್ರತಿಭಟನೆ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಇಂದು ಮೆಟ್ರೋ ರೈಲುಗಳ ಕಾರ್ಯಾಚರಣೆಯನ್ನು ಸಂಜೆಯವರೆಗೆ ಸ್ಧಗಿತಗೊಳಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.