ಈಗಿನ ಸುದ್ದಿ

ಆಂಧ್ರ ಸಿಎಂ ಸೇರಿ 50 ಶಾಸಕರ ರಾಜಿನಾಮೆ?

ಆಂಧ್ರ ಸಿಎಂ ಸೇರಿ 50 ಶಾಸಕರ ರಾಜಿನಾಮೆ?
Published On :

ನವದೆಹಲಿ: ತೆಲಂಗಾಣ ಪ್ರತ್ಯೆಕ ರಾಜ್ಯ ರಚನೆ ವಿವಾದವೀಗ ಆಂಧ್ರಪ್ರದೇಶ ಕಾಂಗ್ರೆಸ್‌ನಲ್ಲಿ ಭಾರಿ ಬಂಡಾಯಕ್ಕೆ ಎಡೆ ಮಾಡಿಕೊಟ್ಟಿದ್ದು, ಮುಖ್ಯಮಂತ್ರಿ ಕಿರಣ್‌ಕುಮಾರ್ ರೆಡ್ಡಿ ಸೇರಿದಂತೆ ಸುಮಾರು ಸೀಮಾಂಧ್ರ 50 ಶಾಸಕರು ನಾಳೆ ರಾಜಿನಾಮೆ ನೀಡುವ ಸಾಧ್ಯತೆಗಳಿವೆ.

ಈ ಸಂಬಂಧ ಕಿರಣ್ ಕುಮಾರ್ ರೆಡ್ಡಿ ಅವರು ನಾಳೆ ಬೆಳಗ್ಗೆ 10.45ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸುದ್ದಿಗೋಷ್ಠಿ ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿ ರಾಜಿನಾಮೆ ಪತ್ರ ಸಲ್ಲಿಸುವ ಸಾಧ್ಯತೆ ಇದೆ. ಜೊತೆಗೆ ನೂತನ ಪಕ್ಷ ಸ್ಥಾಪನೆ ಮಾಡಲಿದ್ದಾರೆ ಎನ್ನಲಾಗಿದೆ.

ತೆಲಂಗಾಣ ವಿವಾದ ಹಿನ್ನೆಲೆಯಲ್ಲಿ ಆಂಧ್ರದಲ್ಲಿ ಕಾಂಗ್ರೆಸ್ ಇಬ್ಭಾಗವಾಗುವ ಹಾದಿಯಲ್ಲಿದ್ದು, ಕಿರಣ್ ಕುಮಾರ್ ರೆಡ್ಡಿ, ಸೇರಿ 50 ಶಾಸಕರು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವ ರಾಜಿನಾಮೆ ನೀಡಲಿದ್ದಾರೆ.

ಬಾರಿ ವಿರೋಧದ ನಡುವೆಯು ಇಂದು ಲೋಕಸಭೆಯಲ್ಲಿ ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ ಮಸೂದೆ ಅಂಗೀಕಾರವಾಗಿದ್ದು, ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾದ ಸುದ್ದಿ ಬಹಿರಂಗಗೊಳ್ಳುತ್ತಿದ್ದಂತೆ ಆಂಧ್ರಪ್ರದೇಶದ ಕಾಂಗ್ರೆಸ್‌ನಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿವೆ.

ಈ ವೇಳೆ, ಅಖಂಡ ಆಂಧ್ರಪ್ರದೇಶಕ್ಕಾಗಿ ಬೆಂಬಲಿಸಿ ಆಂಧ್ರದ ಮೂಲಸೌಕರ್ಯ ಸಚಿವ ಗಂಟಾ ಶ್ರೀನಿವಾಸ್ ಅವರು ತಮ್ಮ ಸಚಿವ ಸ್ಥಾನ ಸೇರಿದಂತೆ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೂ ರಾಜಿನಾಮೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.