ಕೃಷ್ಣಾ ನ್ಯಾಯಾಧೀಕರಣ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ

ಬೆಂಗಳೂರು: ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ 2013 ನವೆಂಬರ್ 29 ರಂದು ಕೃಷ್ಣಾ ನ್ಯಾಯಾಧೀಕರಣ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಮಂಗಳವಾರ ನಿರ್ಧರಿಸಿದೆ.
ಹಿರಿಯ ವಕೀಲ ನಾರಿಮನ್ ಅವರ ಸಲಹೆಯಂತೆ ಕೃಷ್ಟಾ ನ್ಯಾಯಾಧೀಕರಣ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಕೆಲವೊಂದು ಮಾರ್ಪಾಡು ಮಾಡುವ ಅಗತ್ಯತೆ ಇದ್ದು, ಈ ಸಂಬಂಧ ಸ್ಪಷ್ಟಿಕರಣಕ್ಕಾಗಿ ಸುಪ್ರೀಂಕೋರ್ಟ್‌ಗೆ ವಿಶೇಷ ಮೇಲ್ಮನವಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಕೃಷ್ಣಾ ನ್ಯಾಯಾಧೀಕರಣ ತೀರ್ಪಿಗೆ ಮೇಲ್ಮನವಿ ಸಲ್ಲಿಸುವಂತೆ ಪ್ರತಿಪಕ್ಷಗಳು ಸಹ ಸಲಹೆ ನೀಡಿದ್ದವು ಎಂದು ಸಿಎಂ ಸಿದ್ದು ಹೇಳಿದ್ದಾರೆ.
ಆಲಮಟ್ಟಿ ಜಲಾಶಯದ ಅಣೆಕಟ್ಟೆಯನ್ನು 524 ಮೀಟರ್‌ಗೆ ಏರಿಸಿರುವುದನ್ನು ವಿರೋಧಿಸಿ ಆಂಧ್ರಪ್ರದೇಶ ಸಲ್ಲಿಸಿದ್ದ ಅರ್ಜಿಯನ್ನು ಕೃಷ್ಣಾ ನ್ಯಾಯಾಧೀಕರಣ ತಳ್ಳಿಹಾಕಿತ್ತು. ಅಲ್ಲದೆ ಆಲಮಟ್ಟಿ ಅಣೆಕಟ್ಟು ಎತ್ತರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ನ್ಯಾಯಾಧೀಕರಣ ಸ್ಪಷ್ಟಪಡಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


