ಈಗಿನ ಸುದ್ದಿ

ಜಯಲಲಿತಾ ನಿರ್ಧಾರ ಬೇಸರ ತಂದಿದೆ: ರಾಹುಲ್ ಗಾಂಧಿ

ಜಯಲಲಿತಾ ನಿರ್ಧಾರ ಬೇಸರ ತಂದಿದೆ: ರಾಹುಲ್ ಗಾಂಧಿ
Published On :

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವ ತಮಿಳುನಾಡು ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ.

ರಾಜೀವ್ ಹಂತಕರ ಬಿಡುಗಡೆ ವಿಚಾರದ ಕುರಿತು ಮಾತನಾಡಿದ ರಾಹುಲ್ ಗಾಂಧಿ ಅವರು, 'ನಾನು ಕೂಡ ಗಲ್ಲು ಶಿಕ್ಷೆಯನ್ನು ವಿರೋಧಿಸುತ್ತೇನೆ. ಆದರೆ ದೇಶದ ಪ್ರಧಾನಿಯನ್ನು ಕೊಂದವರನ್ನು ಬಿಡುಗಡೆ ಮಾಡುವ ತಮಿಳುನಾಡು ಸರ್ಕಾರದ ನಿರ್ಧಾರ ನನಗೆ ಬೇಸರ ತಂದಿದೆ' ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಕೊಂದ ಹಂತಕರ ಶಿಕ್ಷೆಯ ಪ್ರಮಾಣವನ್ನು ಕಡಿತಗೊಳಿಸದ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆಯನ್ನು ಜೀವಾವಧಿಯಾಗಿ ಮಾರ್ಪಡಿಸಿತ್ತು. ಇದರ ಬೆನ್ನಲ್ಲೇ ಇದೀಗ ತಮಿಳುನಾಡು ಸರ್ಕಾರ ರಾಜೀವ್ ಹಂತಕರನ್ನು ಬಿಡುಗಡೆ ಮಾಡುವ ನಿರ್ಧಾರ ಕೈಗೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.