ಈಗಿನ ಸುದ್ದಿ

ಧೋನಿಗೆ ರಾಹುಲ್ ಕಿವಿ ಮಾತು

ಧೋನಿಗೆ ರಾಹುಲ್ ಕಿವಿ ಮಾತು
Published On :

ವೆಲ್ಲಿಂಗ್ಟನ್: ವಿದೇಶ ನೆಲೆದಲ್ಲಿ ಅಂತರ್‌ರಾಷ್ಟ್ರೀಯ ಟೆಸ್ಟ್ ಕ್ರಿಟೆಕ್ ಸರಣಿಯನ್ನು ಸೋತು ಸುಣ್ಣವಾಗಿರುವ ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರು ಕಿವಿ ಮಾತು ಹೇಳಿದ್ದಾರೆ.

ವಿದೇಶಿ ನೆಲದಲ್ಲಿ ಆಡುವ ಸಂದರ್ಭದಲ್ಲಿ ಪಂದ್ಯಗಳನ್ನು ಗೆಲ್ಲಲು ಧೋನಿ 'ಕೆಲವು ಕಠಿಣ ನಿರ್ಧಾರ' ತೆಗೆದುಕೊಳ್ಳುವ ಅಗತ್ಯವಿದೆ ಎಂದು ರಾಹುಲ್ ಸಲಹೆ ನೀಡಿದ್ದಾರೆ.

ವಿದೇಶಿ ನೆಲದಲ್ಲಿ ಪಂದ್ಯಗಳನ್ನು ಗೆಲ್ಲಲು ಧೋನಿ ಬಯಸಿದರೇ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂಬುದನ್ನು ಅವರು ಬೇಗನೆ ಅರ್ಥ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ವಿದೇಶಿ ನೆಲದಲ್ಲಿ ಮತ್ತಷ್ಟು ಪಂದ್ಯಗಳನ್ನು ಕೈ ಚೆಲ್ಲುವ ಅಪಾಯಗಳಿವೆ ಎಂದಿದ್ದಾರೆ.

ಧೋನಿ ನಾಯಕತ್ವದ ಪಂದ್ಯಗಳ ನಿರ್ಣಾಯಕ ಸಂದರ್ಭಗಳಲ್ಲಿ ರಕ್ಷಣಾತ್ಮಕವಾಗಿರುತ್ತದೆ. ಆದರೆ ಬೌಲಿಂಗ್ ದಾಳಿಯ ಮೇಲೆ ಅವರಿಗೆ ನಂಬಿಕೆ ಇರುವುದಿಲ್ಲ ಎಂದು ನಾನು ಭಾವಿಸಿದ್ದೇನೆ.

ಇದಕ್ಕೆ ಸಾಕ್ಷಿ ಎಂಬಂತೆ ಡರ್ಬನ್‌ನಲ್ಲಿ ನಡೆದ ಪಂದ್ಯದಲ್ಲಿ ಧೋನಿ ಸುಮಾರು 146 ಓವರ್‌ಗಳವರೆಗೂ ಹೊಸ ಚೆಂಡನ್ನು ತೆಗೆದುಕೊಂಡಿರಲಿಲ್ಲ. ಆದರೆ ಒತ್ತಾಯದ ನಂತರ ಧೋನಿ ಹೊಸ ಚೆಂಡನ್ನು ತೆಗೆದುಕೊಂಡರು. ಹೀಗಾಗಿ ಧೋನಿ ಮೊದಲು ತನ್ನ ವೇಗಿಗಳ ಮೇಲೆ ನಂಬಿಕೆ ಇಟ್ಟು ಬೌಲಿಂಗ್ ದಾಳಿಗೆ ಇಳಿದರೆ ಪಂದ್ಯಗಳನ್ನು ಗೆಲ್ಲುವುದೇನು ಅಸಾಧ್ಯವಲ್ಲ ಎಂದು ರಾಹುಲ್ ಧೋನಿಗೆ ನೈತಿಕ ಬಲ ತುಂಬಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.