ಈಗಿನ ಸುದ್ದಿ

ರಾಜೀವ್ ಹಂತಕರ ಬಿಡುಗಡೆಗೆ ತ.ನಾಡು ಸಂಪುಟ ನಿರ್ಧಾರ

ರಾಜೀವ್ ಹಂತಕರ ಬಿಡುಗಡೆಗೆ ತ.ನಾಡು ಸಂಪುಟ ನಿರ್ಧಾರ
Published On :

ಚೆನ್ನೈ: ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಂತಕರ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ನಿನ್ನೆ ರದ್ದುಗೊಳಿಸಿದ ಹಿನ್ನೆಲೆಯಲ್ಲಿ, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ತಮಿಳುನಾಡು ಸಚಿವ ಸಂಪುಟ ಬುಧವಾರ ನಿರ್ಧರಿಸಿದೆ.

ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ನಳಿನಿ ಸೇರಿದಂತೆ ಪ್ರಕರಣದ ಏಳು ಅಪರಾಧಿಗಳನ್ನು ಬಿಡುಗಡೆ ಮಾಡಲು ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ತಮಿಳುನಾಡು ಸಿಎಂ ತಿಳಿಸಿದ್ದಾರೆ.

ಮೂರು ದಿನದಲ್ಲಿ ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಒಂದು ವೇಳೆ ಕೇಂದ್ರದಿಂದ ಯಾವುದೇ ಉತ್ತರ ಬರದಿದ್ದರೆ ರಾಜ್ಯ ಸರ್ಕಾರ ತನ್ನ ವಿಶೇಷ ಅಧಿಕಾರ ಬಳಸಿಕೊಂಡು ಮುಂದಿನ ಮೂರು ದಿನದಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಕರಣದ ಏಳು ಅಪರಾಧಿಗಳಾದ ಸಂತನ್, ನಳಿನಿ ಪೆರಾರಿವಲನ್, ರಾಬರ್ಟ್ ಪಯಸ್, ಮುರಗನ್, ರವಿಚಂದ್ರನ್ ಹಾಗೂ ಜಯಕುಮಾರ್ ಅವರಿಗೆ ಸದ್ಯ ಬಿಡುಗಡೆಯ ಭಾಗ್ಯ ದೊರೆತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.