ರಾಜ್ಯಸಭೆಯಲ್ಲಿ ಹೈ-ಡ್ರಾಮ: ಪ್ರಧಾನ ಕಾರ್ಯದರ್ಶಿಗೆ ಟಿಡಿಪಿ ಸಂಸದನಿಂದ ಹಲ್ಲೆ

ನವದೆಹಲಿ: ರಾಜ್ಯಸಭೆಯಲ್ಲಿ ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ ಮಸೂದೆ ಮಂಡನೆ ವೇಳೆ ಸೀಮಾಂಧ್ರ ಹಾಗೂ ತೆಲುಗು ದೇಶಂ ಪಕ್ಷದ ಸಂಸದರು ಅಸಭ್ಯ ವರ್ತನೆ ತೋರಿದ್ದು, ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ರಾಜ್ಯಸಭೆಯಲ್ಲಿ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ಮಸೂದೆಯನ್ನು ಪ್ರಧಾನ ಕಾರ್ಯದರ್ಶಿ ಅವರು ಮಂಡಿಸುತ್ತಿದ್ದ ವೇಳೆ, ಸಭಾಪತಿಗಳ ಪೀಠದ ಮುಂದಿನ ಬಾವಿಗೆ ಇಳಿದ ಟಿಡಿಪಿ ಸಂಸದ ರಮೇಶ್ ಗೂಂಡಾ ವರ್ತನೆ ತೋರಿದ್ದಾರೆ. ಈ ವೇಳೆ ಪ್ರಧಾನ ಕಾರ್ಯದರ್ಶಿ ಅವರು ಮಂಡಿಸುತ್ತಿದ್ದ ಕಾಗದ ಪತ್ರಗಳನ್ನು ಕಸಿದುಕೊಂಡು ಹರಿದು ಹಾಕಲು ಯತ್ನಿಸಿದ್ದು, ಅಲ್ಲದೆ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಿನ್ನೆ ಲೋಕಸಭೆಯಲ್ಲಿ ತೆಲಂಗಾಣ ವಿಧೇಯಕಕ್ಕೆ ಅಂಗೀಕಾರ ನೀಡಲಾಗಿತ್ತು. ಇಂದು ರಾಜ್ಯಸಭೆಯಲ್ಲಿ ವಿಧೇಯಕ ಮಂಡನೆ ವೇಳೆ ಸೀಮಾಂಧ್ರ ಸಂಸದರು ರಾಜ್ಯಸಭೆಯಲ್ಲಿ ಗದ್ದಲ ಎಬ್ಬಿಸಿದರು. ಅಲ್ಲದೆ ವಿಧೇಯಕಕ್ಕೆ ಅಂಗೀಕಾರ ನೀಡದಂತೆ ಭಾವಿಗೆ ಇಳಿದು ಪ್ರತಿಭಟಿಸಿದರು. ಈ ಹಿನ್ನೆಲೆಯಲ್ಲಿ ರಾಜ್ಯಸಭಾ ಕಲಾಪವನ್ನು ಸಂಜೆ 4 ಗಂಟೆಗೆ ಮುಂದೂಡಲಾಯಿತು.
ಇತ್ತೀಚೆಗಷ್ಟೆ ಲೋಕಸಭೆಯಲ್ಲಿ ತೆಲಂಗಾಣ ರಾಜ್ಯ ರಚನೆ ವಿರೋಧಿಸಿ ಆಂಧ್ರ ಸಂಸದರು ಪೆಪ್ಪರ್ ಸ್ಪ್ರೇ ಸಿಂಪಡಿಸಿ, ಮೈಕ್, ಕಂಪ್ಯೂಟರ್ನ್ನು ಜಖಂಗೊಳಿಸಿ ದಾಂಧಲೆ ನಡೆಸಿದ್ದರು. ಇದು ಭಾರತದ ಸಂಸದೀಯ ಇತಿಹಾಸದಲ್ಲೇ ಕಪ್ಪು ಚುಕ್ಕೆಯಾಗಿ ಸಾರ್ವಜನಿಕರ ಟೀಕೆಗೆ ಗುರಿಯಾಗಿತ್ತು. ಇಂದು ರಾಜ್ಯಸಭೆಯಲ್ಲಿ ನಡೆದ ಈ ಘಟನೆಗೂ ಸಭಾಪತಿ ಹಾಗೂ ಸದನದ ಹಿರಿಯ ಸದಸ್ಯರು ತೀವ್ರ ಅತೃಪ್ತಿ ವ್ಯಕ್ತಪಡಿಸಿದ್ದಾರೆ.
ರಾಜ್ಯಸಭೆಯಲ್ಲಿ ಅಸಭ್ಯ ವರ್ತನೆ ತೋರಿದ್ದಕ್ಕಾಗಿ ರಮೇಶ್ ಪ್ರಧಾನ ಕಾರ್ಯದರ್ಶಿಯನ್ನು ಕ್ಷಮೆ ಯಾಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


