ತೇಜಪಾಲ್ಗೆ ಸಿಸಿಟಿವಿ ದೃಶ್ಯಾವಳಿ ನೀಡಲು ಕೋರ್ಟ್ ಸಮ್ಮತಿ

ಪಣಜಿ: ತೆಹಲ್ಕಾ ಪತ್ರಿಕೆಯ ಮಾಜಿ ಸಂಪಾದ ತರುಣ್ ತೇಜಪಾಲ್ ಅವರಿಗೆ ಸಿಸಿಟಿವಿ ದೃಶ್ಯಾವಳಿಗಳ ನಕಲು ನೀಡಲು ನ್ಯಾಯಾಲಯ ಸಮ್ಮತಿ ಸೂಚಿಸಿದೆ.
ಈ ಹಿಂದೆ ತಮ್ಮ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ರೂಪಿಸಲಾಗುತ್ತಿದ್ದು, ಪ್ರಕರಣವನ್ನು ಹಾದಿ ತಪ್ಪಿಸಲಾಗುತ್ತಿದೆ. ಹೀಗಾಗಿ ತಮಗೆ ಸಿಸಿಟಿವಿ ದೃಶ್ಯಾವಳಿಯ ನಕಲು ನೀಡಬೇಕು ಎಂದು ತೇಜಪಾಲ್ ಪರ ವಕೀಲರು ಮನವಿ ಮಾಡಿದ್ದರು. ಇಂದು ಪ್ರಕರಣದ ವಿಚಾರಣೆಯನ್ನು ನಡೆಸಿದ ನ್ಯಾ.ಅನುಜಾ ಪ್ರಭು ದೇಸಾಯಿ ಅವರು, ತರುಣ್ತೇಜಪಾಲ್ಗೆ ಗೋವಾದ ಬ್ಯಾಂಬೊಲಿನ್ ಹೊಟೆಲ್ನ ಸಿಸಿಟಿವಿ ದೃಶ್ಯಾವಳಿಗಳ ನಕಲನ್ನು ನೀಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ಸಹೋದ್ಯೋಗಿ ಪತ್ರಕರ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣವನ್ನು ಪ್ರಸ್ತುತ ಗೋವಾ ಕ್ರೈಂ ಬ್ರಾಂಚ್ ಅಧಿಕಾರಿಗಳು ತನಿಖೆ ನಡೆಸುತಿದ್ದಾರೆ. ತನಿಖಾಧಿಕಾರಿಗಳ ಮೇಲೆ ಅವಿಶ್ವಾಸ ವ್ಯಕ್ತಪಡಿಸಿರುವ ತರುಣ್ ತೇಜಪಾಲ್ ಅವರು, ಪ್ರಕರಣದಲ್ಲಿ ಸಿಸಿಟಿವಿ ದೃಶ್ಯಾವಳಿಗಳೇ ಪ್ರಮುಖ ಸಾಕ್ಷಿಗಳಾಗಿದ್ದು, ತಮಗೂ ನಕಲು ಪ್ರತಿಯನ್ನು ನೀಡಬೇಕು ಎಂದು ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


