ಮಮತಾ ಬ್ಯಾನರ್ಜಿಗೆ ನನ್ನ ಬೆಂಬಲ: ಅಣ್ಣಾ ಹೇಳಿಕೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ನಾನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಬೆಂಬಲಿಸುತ್ತೇನೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.
ನವದೆಹಲಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಣ್ಣಾ ಹಜಾರೆ ಅವರು, ವೈಯುಕ್ತಿಕವಾಗಿ ಅಥವಾ ಯಾವುದೇ ಲಾಭಾಕಾಂಕ್ಷೆಗಳಿಂದ ನಾನು ಮಮತಾ ಬ್ಯಾನರ್ಜಿ ಅವರನ್ನು ಬೆಂಬಲಿಸುತ್ತಿಲ್ಲ. ದೇಶದ ಅಭಿವೃದ್ಧಿ ವಿಚಾರವಾಗಿ ಅವರ ಧೋರಣೆ ಮತ್ತು ದೂರದೃಷ್ಠಿ ನನಗೆ ಇಷ್ಟವಾಗಿದೆ. ದೇಶದ ಅಭಿವೃದ್ಧಿ ಬಗ್ಗೆ ಚಿಂತಿಸುವ ವ್ಯಕ್ತಿಯೊಬ್ಬರನ್ನು ನಾನು ಇದೇ ಮೊದಲ ಬಾರಿಗೆ ನೋಡುತ್ತಿದ್ದೇನೆ. ಹೀಗಾಗಿ ಪ್ರಧಾನಿ ಅಭ್ಯರ್ಥಿಯಾಗಿ ಮಮತಾ ಬ್ಯಾನರ್ಜಿ ಅವರನ್ನು ನಾನು ಬೆಂಬಲಿಸುತ್ತೇನೆ.
ಮಮತಾ ಬಯಸಿದರೆ ಐಶಾರಮಿ ಜೀವನ ನಡೆಸಬಹುದಾಗಿದೆ ಆದರೆ ಅವರು ಅದನ್ನೆಲ್ಲಾ ತೊರೆದು ಇಂದಿಗೂ ಸರಳ ಜೀವನ ನಡೆಸುತ್ತಿದ್ದಾರೆ. ಕೇವಲ ಒಂದು ಕೋಣೆ ಇರುವ ಮನೆಯಲ್ಲಿಯೇ ಅವರು ವಾಸವಾಗಿದ್ದಾರೆ. ಇಂತಹ ಸರಳ ಗುಣಗಳು ನನ್ನನ್ನು ಸೆಳೆದವು ಎಂದು ಅಣ್ಣಾ ಹೇಳಿದ್ದಾರೆ.
ದೇಶದ ಅಭಿವೃದ್ಧಿ ವಿಚಾರವಾಗಿ ದೇಶದ ಎಲ್ಲ ರಾಜಕೀಯ ಪಕ್ಷಗಳಿಗೆ ನಾಲ್ಕು ತಿಂಗಳ ಹಿಂದೆ ಸುಮಾರು 17 ವಿಚಾರಗಳನ್ನು ಪ್ರಸ್ತಾಪಿಸಿ ಪತ್ರ ಬರೆದಿದ್ದೆ. ಯಾವೊಂದು ಪಕ್ಷವೂ ಇದಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ ಮಮತಾ ಬ್ಯಾನರ್ಜಿ ಮಾತ್ರ ಈ ಬಗ್ಗೆ ಪ್ರತಿಕ್ರಿಸಿದ್ದರು ಎಂದು ಅಣ್ಣಾ ಹೇಳಿದರು.
ಕೇಜ್ರಿಗಿಲ್ಲ ಅಣ್ಣಾ ಬೆಂಬಲ
ಇದೇ ವೇಳೆ ತಮ್ಮದೇ ಹೋರಾಟದಿಂದ ಖ್ಯಾತಿ ಗಳಿಸಿ ದೆಹಲಿ ಸಿಎಂ ಗಿರಿ ಪಟ್ಟ ಪಡೆದ ಅರವಿಂದ್ ಕೇಜ್ರಿವಾಲ್ ಅವರನ್ನೂ ಕೂಡ ತಾವು ಬೆಂಬಲಿಸುವುದಿಲ್ಲ ಎಂದು ಅಣ್ಣಾ ಹೇಳಿದ್ದಾರೆ. ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅಥವಾ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಅವರನ್ನು ತಾವು ಬೆಂಬಲಿಸುವುದಿಲ್ಲ ಎಂದು ಅಣ್ಣಾ ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


