ಮಾನನಷ್ಟ ಮೊಕದ್ದಮೆ: ಕ್ರೇಜ್ರಿಗೆ ದೆಹಲಿ ಹೈಕೋರ್ಟ್ ನೋಟಿಸ್

ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಹರ್ಯಾಣದ ಫರೀದಾಬಾದ್ ಸಂಸದ ಅವತಾರ್ ಸಿಂಗ್ ಭದಾನ ಅವರು ಸಲ್ಲಿಸಿದ್ದ ದೂರಿ ವಿಚಾರಣೆ ನಡೆಸಿದ ದೆಹಲಿ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಅರವಿಂದ್ ಕೇಜ್ರಿವಾಲ್ ಅವರು ದುರುದ್ದೇಶ ಪೂರ್ವಕವಾಗಿ ತಮ್ಮ ಹೆಸರನ್ನು ಭ್ರಷ್ಟ ರಾಜಕಾರಣಿಗಳ ಪಟ್ಟಿಗೆ ಸೇರಿಸಿದ್ದು, ಇದರಿಂದ ತಮ್ಮ ಕ್ಷೇತ್ರದಲ್ಲಿ ತಮಗೆ ಮಾನಹಾನಿಯಾಗಿದೆ. ಹೀಗಾಗಿ ಅರವಿಂದ್ ಕೇಜ್ರಿವಾಲ್ ಅವರು ಈ ಕೂಡಲೇ ಬಹಿರಂಗವಾಗಿ ತಮ್ಮನ್ನು ಕ್ಷಮೆಯಾಟಿಸಬೇಕು ಮತ್ತು ಒಂದು ಕೋಟಿ ಹಣವನ್ನು ಪರಿಹಾರವಾಗಿ ನೀಡುಬೇಕು ಎಂದು ದೂರಿನಲ್ಲಿ ಕೋರಿದ್ದರು.
ದೂರಿನ ವಿಚಾರಣೆ ನಡೆಸಿದ ನ್ಯಾ.ಆರ್.ಕೆ. ಪಟ್ನಾಯಕ್ ಅವರು ಅರವಿಂದ್ ಕೇಜ್ರಿವಾಲ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಲೋಕಸಭೆ ಚುನಾವಣೆ ಮುಕ್ತಾಯ ಗೊಳ್ಳುವವರೆಗೂ ಅವತಾರ್ ಸಿಂಗ್ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಸೂಚಿಸಿದೆ. ಅಲ್ಲದೆ ಪ್ರಕರಣದ ವಿಚಾರಣೆ ಮೇ.6ಕ್ಕೆ ಮುಂದೂಡಿದೆ. ಕಳೆದ ಜನವರಿ 31ರಂದು ದೇಶದ ಅತಿ ಭ್ರಷ್ಟ ರಾಜಕಾರಣಿಗಳ ಪಟ್ಟಿ ಬಿಡುಗಡೆ ಮಾಡಿದ್ದ ಅರವಿಂದ್ ಕೇಜ್ರಿವಾಲ್ ಅವರು ರಾಜಕಾರಣಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


