ಈಗಿನ ಸುದ್ದಿ

ರಾಜ್ಯಸಭೆಯಲ್ಲಿ ತೆಲಂಗಾಣ ವಿಧೇಯಕ ಅಂಗೀಕಾರ

ರಾಜ್ಯಸಭೆಯಲ್ಲಿ ತೆಲಂಗಾಣ ವಿಧೇಯಕ ಅಂಗೀಕಾರ
Published On :

ನವದೆಹಲಿ: ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ ವಿಧೇಯಕ ರಾಜ್ಯಸಭೆಯಲ್ಲಿಯೂ ಅಂಗೀಕಾರವಾಗಿದ್ದು, ನೂತನ ತೆಲಂಗಾಣ ರಾಜ್ಯ ಉದಯವಾಗಲಿದೆ.

ಅಂಧ್ರ ಪ್ರದೇಶ ವಿಭಜನೆಯ ವಿಧೇಯಕ ಮಂಡನೆ ನಂತರ ಮತದಾನದ ಮೂಲಕ ವಿಧೇಯಕವನ್ನು ಅಂಗೀಕರಿಸಲಾಗಿದೆ. ಇದಕ್ಕೂ ಮೊದಲು ಲೋಕಸಭೆಯಲ್ಲಿಯೂ ಮಸೂದೆಯನ್ನು ಅಂಗೀಕರಿಸಲಾಗಿತ್ತು. ಇದೀಗ ರಾಜ್ಯಸಭೆಯಲ್ಲಿ ವಿಧೇಯಕಕ್ಕೆ ಅಂಗೀಕಾರ ದೊರೆತಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಂಕಿತ ಮಾತ್ರ ಬಾಕಿ ಉಳಿದಿದೆ.

ದೇಶದ 29ನೇ ರಾಜ್ಯವಾಗಿ ತೆಲಂಗಾಣ ರಾಜ್ಯ ಉದಯವಾಗಲಿದ್ದು, ತೆಲಂಗಾಣ ಮತ್ತು ಆಂಧ್ರ ಪ್ರದೇಶ ರಾಜ್ಯಗಳಿಗೆ ಹೈದರಾಬಾದ್ ನಗರ ಮುಂದಿನ 10 ವರ್ಷಗಳ ಕಾಲ ಜಂಟಿ ರಾಜಧಾನಿಯಾಗಿರಲಿದೆ. ಅಂತೆಯೇ ಉಭಯ ರಾಜ್ಯಗಳ ಅಭಿವೃದ್ಧಿಗಾಗಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದ್ದು, ಸೀಮಾಂಧ್ರ ಭಾಗದ ಅಭಿವೃದ್ಧಿಗಾಗಿ 6 ವಿಶೇಷ ಅಂಶಗಳ ಯೋಜನೆ ಘೋಷಣೆ ಮಾಡಲಿದ್ದಾರೆ.

ರಾಜ್ಯಸಭೆಯಲ್ಲಿ ಕೋಲಾಹಲ, ಸೀಮಾಂಧ್ರ ಸಂಸದರಿಂದ ಭಾರಿ ಗದ್ದಲ

ಇದೇ ವೇಳೆ ರಾಜ್ಯಸಭೆಯಲ್ಲಿ ತೆಲಂಗಾಣ ವಿಧೇಯಕ ಅಂಗೀಕಾರವಾಗುತ್ತಿದ್ದಂತೆಯೇ ಸೀಮಾಂಧ್ರ ಸಂಸದರು ಕೋಲಾಹಲವನ್ನೇ ಎಬ್ಬಿಸಿದ್ದಾರೆ. ಆಂಧ್ರ ವಿಭಜನೆಯನ್ನು ವಿರೋಧಿಸಿರುವ ಸಂಸದರು ಪ್ರಧಾನಿ ಸಿಂಗ್ ಮತ್ತು ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.