ಈಗಿನ ಸುದ್ದಿ

ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ 'ಆಪ್' ವಿರೋಧ

ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ 'ಆಪ್' ವಿರೋಧ
Published On :

ನವದೆಹಲಿ: ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಶಿಫಾರಸ್ಸು ಮಾಡಿರುವ ಉಪರಾಜ್ಯಪಾಲ ನಜೀಬ್ ಜಂಗ್ ಅವರ ಕ್ರಮವನ್ನು ಆಮ್ ಆದ್ಮಿ ಪಕ್ಷ ವಿರೋಧಿಸಿದ್ದು, ರಾಷ್ಟ್ರಪತಿ ಆಡಳಿತ ಹೇರದಂತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಉಪರಾಜ್ಯಪಾಲ ನಜೀಬ್ ಜಂಗ್ ಅವರ ನಿರ್ಧಾರ ದುರುದ್ದೇಶಪೂರ್ವಕವಾಗಿದ್ದು, ಸಂವಿಧಾನ ಬಾಹಿರ ಎಂದು ಆಪ್ ತನ್ನ ದೂರಿನಲ್ಲಿ ಹೇಳಿದೆ. ಅಲ್ಲದೆ ಈ ಕೂಡಲೇ ದೆಹಲಿಯಲ್ಲಿ ಚುನಾವಣೆ ಘೋಷಿಸಬೇಕು ಎಂದು ಆಪ್ ಆಗ್ರಹಿಸಿದೆ.

ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜಿನಾಮೆ ನಂತರ ದೆಹಲಿಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ, ರಾಷ್ಟ್ರಪತಿ ಆಡಳಿತ ಜಾರಿಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಇದೀಗ ಆಪ್ ತನ್ನ ವರಸೆ ಬದಲಿಸಿದ್ದು, ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ದೆಹಲಿ ವಿಧಾನಸಭೆಯಲ್ಲಿ ಜನಲೋಕಪಾಲ್ ಮಸೂದೆ ಮಂಡನೆಯಾಗದ ಹಿನ್ನಲೆಯಲ್ಲಿ ಕೇಜ್ರಿವಾಲ್ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದರು. ಕೇಜ್ರಿವಾಲ್ ಅವರ ರಾಜಿನಾಮೆ ಮೂಲಕ ನಲವತ್ತೊಂಬತ್ತು ದಿನಗಳ ದೆಹಲಿ ಸರ್ಕಾರ ಅಂತ್ಯವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.