ಈಗಿನ ಸುದ್ದಿ

ರಾಜೀವ್ ಹಂತಕರ ಬಿಡುಗಡೆಗೆ ಪ್ರಧಾನಿ ಆಕ್ಷೇಪ

ರಾಜೀವ್ ಹಂತಕರ ಬಿಡುಗಡೆಗೆ ಪ್ರಧಾನಿ ಆಕ್ಷೇಪ
Published On :

ನವದೆಹಲಿ: ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹಂತಕರನ್ನು ಮೂರು ದಿನಗಳೊಳಗೆ ಬಿಡುಗಡೆ ಮಾಡಲು ಮುಂದಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿರ್ಧಾರಕ್ಕೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುರುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡದಂತೆ ತಮಿಳುನಾಡು ಸಿಎಂಗೆ ಒತ್ತಾಯಿಸಿದ್ದಾರೆ. ಅಲ್ಲದೆ ತಾವು ತೆಗೆದುಕೊಂಡಿರುವ ನಿರ್ಧಾರವನ್ನು ಹಿಂಪಡೆಯುವಂತೆ ಜಯಲಲಿತಾಗೆ ಪ್ರಧಾನಿ ಆಗ್ರಹಿಸಿದ್ದಾರೆ.

ಮಾಜಿ ಪ್ರಧಾನಿ ಅವರನ್ನು ಹತ್ಯೆ ಮಾಡಿರುವುದು ಸಣ್ಣ ವಿಷಯವಲ್ಲ. ಈ ವಿಚಾರವನ್ನು ತಾವು ಲಘುವಾಗಿ ಪರಿಗಣಿಸಬಾರದು ಎಂದಿರುವ ಪ್ರಧಾನಿ ಸಿಂಗ್, ಉಗ್ರರ ಬಗ್ಗೆ ಮೃದು ಧೋರಣೆ ಸರಿಯಲ್ಲ ಎಂದು ಹೇಳಿದ್ದಾರೆ.

ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವ ಜಯಲಲಿತಾ ನಿರ್ಧಾರದವನ್ನು ಖಂಡಿಸಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ನಿನ್ನೆ ತೀವ್ರ ಬೇಸರ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.