ಅಂಬಾನಿ ಬಗ್ಗೆ ನಿಮ್ಮ ನಿಲವು ಸ್ಪಷ್ಟಪಡಿಸಿ: ಮೋದಿಗೆ ಕೇಜ್ರಿವಾಲ್ ಪತ್ರ

ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಗುಜರಾತ್ ಮುಖ್ಯಮಂತ್ರಿ, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಗ್ಯಾಸ್ ದರದ ಬಗ್ಗೆ ನಿಮ್ಮ ನಿಲವು ಸ್ಪಷ್ಟಪಡಿಸುವಂತೆ ಮೋದಿಗೆ ಒತ್ತಾಯಿಸಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಮತ್ತೊಮ್ಮೆ ಆರ್‌ಐಎಲ್ ಮುಖ್ಯಸ್ಥ ಮುಕೇಶ್ ಅಂಬಾನಿ ಮೋದಿಗೆ ಹಣ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ ಈ ಬಗ್ಗೆ ಮೋದಿ ಮೌನ ವಹಿಸಿದ್ದು ಏಕೆ?ಎಂದು ಪ್ರಶ್ನಿಸಿದರು.
ಒಂದು ವೇಳೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದ್ದೆಯಾದರೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ಅನಿಲ ದರವನ್ನು ಕಡಿತಗೊಳಿಸುತ್ತಾರೆಯೇ ಎಂದು ಕೇಜ್ರಿವಾಲ್ ಪ್ರಶ್ನಿಸಿದರು.
ನೀವು ಒಬ್ಬ ಪ್ರಧಾನಿ ಅಭ್ಯರ್ಥಿ. ಆದರೂ ಈ ವಿಷಯದ ಬಗ್ಗೆ ಮೌನ ವಹಿಸಿದ್ದು ಏಕೆ? ಮುಂದಿನ ಚುನಾವಣೆಯಲ್ಲಿ ನಿಮ್ಮ ಪಕ್ಷ ಅಧಿಕಾರಕ್ಕೆ ಬಂದು, ನೀವು ಪ್ರಧಾನಿಯಾದರೆ ಅನಿಲ ದರವನ್ನು ಯುನಿಟ್‌ಗೆ 8 ಡಾಲರ್‌ನಿಂದ 4 ಡಾಲರ್‌ಗೆ ಇಳಿಸುತ್ತಿರಾ ಎಂದು ಕೇಜ್ರಿವಾಲ್ ತಮ್ಮ ಪತ್ರದಲ್ಲಿ ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


