ಮುಂಬೈ ಆಪ್ ಕಚೇರಿ ಮೇಲೆ ದಾಳಿ; ಎನ್ ಸಿಪಿ ಕೈವಾಡ ಶಂಕೆ

ಮುಂಬೈ: ಆಮ್ ಆದ್ಮಿ ಪಕ್ಷದ ಮುಂಬೈ ಕಚೇರಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿನ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ.
ಮುಂಬೈನ ಅಂಧೇರಿಯಲ್ಲಿರುವ ಆಪ್ ಕಚೇರಿ ಮೇಲೆ ಸುಮಾರು 20-25 ದುಷ್ಕರ್ಮಿಗಳ ಗುಂಪು ಇಂದು ಮಧ್ಯಾಹ್ನ ದಾಳಿ ಮಾಡಿ ಪೀಠೋಪಕರಣಗಳನ್ನು ದ್ವಂಸಗೊಳಿಸಿದ್ದಾರೆ. ಅಲ್ಲದೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಭಾವಚಿತ್ರಕ್ಕೆ ಬೆಂಕಿಹಚ್ಚಿ ಪರಾರಿಯಾಗಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ಕೆಲ ಕಾರ್ಯಕರ್ತರು ಕಚೇರಿಯಲ್ಲಿಯೇ ಇದ್ದರಾದರೂ ದುಷ್ಕರ್ಮಿಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಅವರು ಅಸಹಾಯಕರಾಗಿದ್ದರು.
ಘಟನೆಯ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಿಮಿಸಿದ ಅಂಧೇರಿ ಪೊಲೀಸರು ಅನುಮಾಸ್ಪದ ವಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ದಾಳಿಯಲ್ಲಿ ಎನ್ಸಿಪಿ ಕಾರ್ಯಕರ್ತರ ಕೈವಾಡ
ದಾಳಿ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಆಮ್ ಆದ್ಮಿ ಪಕ್ಷ, ದಾಳಿಯ ಹಿಂದೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್ ಸಿಪಿ)ದ ಕೈವಾಡವಿದೆ ಎಂದು ಆರೋಪಿದ್ದಾರೆ. ಅಲ್ಲದೆ ಇದಕ್ಕೆ ಪೂರಕವಾಗಿ ಕಚೇರಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಸಾಕ್ಷಿಯಾಗಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


