ತೆಲಂಗಾಣ ರಚನೆ: ಸೋನಿಯಾ ಭೇಟಿ ಮಾಡಿದ ಕೆ.ಸಿ.ಆರ್
ನವದೆಹಲಿ: ತೆಲಂಗಾಣ ರಾಷ್ಟ್ರೀಯ ಸಮಿತಿ ಮುಖ್ಯಸ್ಥ ಕೆ.ಚಂದ್ರಶೇಖರ ರಾವ್ ಅವರು ಭಾನುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.
ದೇಶದ 29ನೇ ರಾಜ್ಯವಾಗಿ ತೆಲಂಗಾಣ ರಾಜ್ಯ ರಚನೆಗೆ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರ ದೊರೆತ ಹಿನ್ನಲೆಯಲ್ಲಿ ಸೋನಿಯಾ ಗಾಂಧಿ ಅವರಿಗೆ ಟಿಆರ್ ಎಸ್ ಮುಖ್ಯಸ್ಥ ಅಭಿನಂದನೆ ಸಲ್ಲಿಸಿದ್ದಾರೆ. ಸುಮಾರು ಅರ್ಧ ಗಂಟೆಗಳ ಕಾಲ ಚರ್ಚಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ.ಚಂದ್ರಶೇಖರ ರಾವ್ ಅವರು, ತೆಲಂಗಾಣ ರಾಜ್ಯ ರಚನೆಗಾಗಿ ಸೋನಿಯಾ ಗಾಂಧಿ ಅವರು ನೀಡಿದ ಸಹಕಾರಕ್ಕಾಗಿ ಧನ್ಯವಾದವನ್ನು ಅರ್ಪಿಸಲಷ್ಟೇ ನಾನು ನವದೆಹಲಿಗೆ ಆಗಮಿಸಿದ್ದೇನೆ ಎಂದು ಹೇಳಿದರು.
ಇದೇ ವೇಳೆ ತಮ್ಮ ಟಿಆರ್‌ಎಸ್ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಚರ್ಚೆ ವೇಳೆ ನಾವು ಯಾವುದೇ ರೀತಿಯ ರಾಜಕೀಯ ಮಾತನಾಡಿಲ್ಲ. ಅಲ್ಲದೆ ದಿಗ್ವಿಜಯ್ ಸಿಂಗ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಹೇಳಿದ್ದಾರೆ ಎಂದು ಕೆಸಿಆರ್ ಹೇಳಿದರು.
ಒಟ್ಟಾರೆ ಟಿಆರ್‌ಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ವಿಲೀನ ಸನಿಹವಾಗಿದ್ದು, ಮೂಲಗಳ ಪ್ರಕಾರ ಲೋಕಸಭಾ ಚುನಾವಣೆಗೂ ಮುನ್ನವೇ ಟಿಆರ್‌ಎಲ್ ಕಾಂಗ್ರೆಸ್‌ನಲ್ಲಿ ವಿಲೀನವಾಗುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

