ಈಗಿನ ಸುದ್ದಿ

ರಾಹುಲ್, ಮೋದಿ ರ್ಯಾಲಿಗೆ ಮುಖೇಶ್ ಹಣ: ಕೇಜ್ರಿವಾಲ್

ರಾಹುಲ್, ಮೋದಿ ರ್ಯಾಲಿಗೆ ಮುಖೇಶ್ ಹಣ: ಕೇಜ್ರಿವಾಲ್
Published On :

ರೋಹ್ತಕ್ (ಹರ್ಯಾಣ): ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಚುನಾವಣಾ ರ್ಯಾಲಿಗೆ ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಅವರು ಹಣ ವ್ಯಯಿಸುತ್ತಿದ್ದಾರೆ ಎಂದು ಆಮ್ ಆದ್ಮಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದರು.

ಹರ್ಯಾಣದ ರೋಹ್ತಕ್ ನಲ್ಲಿ ನಡೆದ ಆಮ್ ಆದ್ಮಿ ಪಕ್ಷದ 'ಜಾದೂ' ರ್ಯಾಲಿಯಲ್ಲಿ ಮಾತನಾಡಿದ ಕೇಜ್ರಿವಾಲ್, ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳ ರ್ಯಾಲಿಗಳಿಗೆ ಮುಖೇಶ್ ಅಂಬಾನಿ ಅವರು ವೆಚ್ಚ ಮಾಡುತ್ತಿದ್ದಾರೆ. ದೇಶಾದ್ಯಂತ ಪ್ರಚಾರ ಮಾಡುತ್ತಿರುವ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಪ್ರಯಾಣಕ್ಕೆ ವೆಚ್ಚವನ್ನು ಯಾರು ಭರಿಸುತ್ತಿದ್ದಾರೆ. ಓರ್ವ ಚಾಯ್ ವಾಲ ಹೆಲಿಕಾಪ್ಟರ್ ವೆಚ್ಚವನ್ನು ಭರಿಸಲು ಸಾಧ್ಯವೇ. ಮೋದಿ ರ್ಯಾಲಿಗೆ ಮುಖೇಶ್ ಹಣ ವ್ಯಯ ಮಾಡುತ್ತಿದ್ದಾರೆ. ಅಂತೆಯೇ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಅವರ ಪ್ರಚಾರ ಕಾರ್ಯಕ್ರಮಗಳಿಗೂ ಇದೇ ಮುಖೇಶ್ ಅಂಬಾನಿ ಅವರು ಹಣ ಖರ್ಚು ಮಾಡುತ್ತಿದ್ದಾರೆ ಎಂದು ಕೇಜ್ರಿವಾಲ್ ಅರೋಪಿಸಿದರು.

ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನರೇಂದ್ರ ಮೋದಿ ಅವರೇ, ನಿಮಗೆ ನಾನು ಮುಖೇಶ್ ಅಂಬಾನಿ ಅವರ ಸ್ವಿಸ್ ಬ್ಯಾಂಕ್ ಖಾತೆಯ ವಿವರವನ್ನು ನೀಡುತ್ತೇನೆ. ಅವರ ಸ್ವಿಸ್ ಖಾತೆಯಲ್ಲಿರುವ ಹಣವನ್ನು ಭಾರತಕ್ಕೆ ವಾಪಸ್ ತರಿಸುತ್ತೀರಾ ಎಂದು ಕೇಜ್ರಿವಾಲ್ ಮೋದಿಗೆ ಸವಾಲೆಸೆದರು. ದೇಶದ ಪ್ರಧಾನಿಯಾಗುವ ಕನಸು ಕಾಣುತ್ತಿರುವ ನರೇಂದ್ರ ಮೋದಿ ಅವರಿಗೆ ದೇಶದ ಜನತೆ ಕಠಿಣ ಪ್ರಶ್ನಗಳನ್ನು ಕೇಳಬೇಕಿದೆ. ಹರ್ಯಾಣ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಅವರು ಆಸ್ಥಿ ಸಂಪಾದನೆಯಲ್ಲಿ ತೊಡಗಿದ್ದಾರೆಯೇ ಹೊರತು, ರಾಜ್ಯದ ಅಭಿವೃದ್ದಿ ಕಡೆ ಅವರಿಗೆ ಕೊಂಚವೂ ಪರಿವೇ ಇಲ್ಲ. ಅವರು ಪ್ರಾಪರ್ಟಿ ಬ್ರೋಕರ್ ಅಂತೆ ವರ್ತಿಸುತ್ತಿದ್ದಾರೆ.

ಆಮ್ ಆದ್ಮಿ ಪಕ್ಷವನ್ನು ಅವರು ರಾಜಕೀಯ ಶಿಶು ಎಂದು ಕರೆಯುತ್ತಾರೆ. ಆದರೆ ಅವರು ನಮ್ಮಷ್ಟು ಕೆಲಸ ಮಾಡಿದರೆ ನಾನು ಈ ಕೂಡಲೇ ರಾಜಕೀಯಕ್ಕೆ ಗುಡ್ ಬೈ ಹೇಳುತ್ತೇನೆ. ಜನರಿಗಾಗಿ ಮತ್ತು ಜನಲೋಕಪಾಲ್ ಗಾಗಿ ನಾನು ನನ್ನ ಮುಖ್ಯಮಂತ್ರಿ ಸ್ಥಾನವನ್ನು ತ್ಯಜಿಸಿದ್ದೇನೆ. ತತ್ವ ಸಿದ್ಧಾಂತಗಳೊಂದಿಗೆ ನಾನು ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಸರ್ವಾಧಿಕಾರ ಈ ವರ್ಷಕ್ಕೆ ಕೊನೆಗೊಳ್ಳಲಿದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.